ಟ್ರೆಂಡಿಂಗ್
ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್, ಆರ್ಯವೈಶ್ಯ ಮಂಡಳಿಯಿಂದ ವಾಕಥಾನ್, ಸೈಕ್ಲಾಥಾನ್ ಗೆ ಚಾಲನೆ


ಕುಶಾಲನಗರ, ಜ 02: ಕುಶಾಲನಗರದ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಹಾಗೂ ಆರ್ಯವೈಶ್ಯ ಮಂಡಳಿಯಿಂದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣ ಹಿನ್ನೆಲೆಯಲ್ಲಿ ಹಮ್ಮಿಕೊಂಡ ವಾಕಥಾನ್, ಸೈಕ್ಲಾಥಾನ್ ಗೆ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದರು.