ಕಾರ್ಯಕ್ರಮ

ರಾಮೇಶ್ವರ ‌ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಂವಾದ ಕಾರ್ಯಕ್ರಮ

ಕುಶಾಲನಗರ, ಅ 05: ರಾಮೇಶ್ವರ ‌ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜಿಲ್ಲಾ ಸಹಕಾರ ತರಬೇತಿ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಸಹಕಾರ ಸಂಘದ ವಿಷಯಗಳ ಕುರಿತಾದ ಸಂವಾದ ಕಾರ್ಯಕ್ರಮವು ನಡೆಯಿತು.
ಕೂಡುಮಂಗಳೂರು ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಹಕಾರ ಸಂಘದ ಬೆಳೆವಣಿಗೆ, ಆಡಳಿತ ಮಂಡಳಿಯ ಮುಖೇನ ಸಂಘದ ಅಭಿವೃದ್ಧಿಗೆ ಹಮ್ಮಿಕೊಳ್ಳುವ ವಿವಿಧ ಯೋಜನೆ, ಸಹಕಾರ ತತ್ವದ ನಿಯಮಾನುಸಾರ ಕೈಗೊಳ್ಳುವ ವಿಷಯಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಈ ಸಂದರ್ಭ ಸಂಘದ ನಿರ್ದೇಶಕರಾದ ನಾಗರಾಜು, ಕೆ.ಪಿ.ರಾಜು, ಕೆ ಬಿ.ರಾಮಚಂದ್ರ, ಜಯಶ್ರೀ, ಎಸ್.ಎಸ್. ಕೃಷ್ಣ, ಜಿಲ್ಲಾ ಸಹಕಾರ ತರಬೇತಿ ಕೇಂದ್ರ ಪ್ರಾಂಶುಪಾಲೆ ಡಾ.ರೇಣುಕಾ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಪಿ. ಮೀನಾ, ಕೇಂದ್ರದ ಉಪನ್ಯಾಸಕ ಸಂಜಯ್ ಸೇರಿದಂತೆ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!