ಅರಣ್ಯ ವನ್ಯಜೀವಿ

ಸುಂದರನಗರ ದೇವಾಲಯ ಬೇಲಿ ತೆರವು ಪ್ರಕರಣ: ಸ್ಥಳಕ್ಕೆ ವಲಯಾಧಿಕಾರಿ ಭೇಟಿ, ದೇವಾಲಯ ಜಾಗಕ್ಕೆ ತೊಂದರೆ ನೀಡದಂತೆ ಶಾಸಕರ ಸೂಚನೆ

ಕುಶಾಲನಗರ,ಜ೧೨: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸುಂದರನಗರದ ೩೧/೧ ರಲ್ಲಿರುವ ಗಣಪತಿ ದೇವಾಲಯ ಜಾಗದ ಬೇಲಿಯನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗಿತ್ತು. ಈ ಹಿನ್ನನೆ ಶಾಸಕರ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದರು.
ಸುಂದರನಗರದ ೩೧/೧ ರ ಸಾರ್ವಜನಿಕರು ಗಣಪತಿ ಪ್ರತಿಷ್ಟಾಪನೆಗೆಂದು ಬಿಡಲ್ಪಟ್ಟಿದ್ದ ಜಾಗದ ಬೇಲಿಯನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗಿತ್ತು. ಈ ಹಿನ್ನಲೆ ಸ್ಥಳೀಯ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದ ಹಿನ್ನಲೆ ಶಾಸಕರು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರು ಶಾಸಕರಿಗೆ ದೂರವಾಣಿ ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದರು. ನಂತರ ಬೇಲಿ ತೆರವುಗೊಳಿಸಲು ಸರ್ಕಾರದಿಂದ ನಿರ್ದಿಷ್ಟವಾದ ಸುತ್ತೋಲೆ ಇಲ್ಲದೇ ದೇವಾಲಯದ ಬೇಲಿ ತೆರವುಗೊಳಿಸಿದ್ದೇಕೆ. ಆದಷ್ಟು ಬೇಗೆನೇ ಈ ಬಗ್ಗೆ ಒಂದು ಸಭೆ ನಡೆಸಲಿದ್ದು, ಸಭೆಯಲ್ಲಿ ಪೂರ್ಣವಾಗಿ ಮಾಹಿತಿ ನೀಡುವಂತೆ ಅರಣ್ಯಾಧಿಕಾರಿಗಳಿಗೆ ದೂರುವಾಣಿ ಮೂಲಕ ಸೂಚಿಸಿದ ಶಾಸಕರು, ವಿನಾಕಾರಣ ಸಾರ್ವಜನಿಕರಿಗೆ ತೊಂದರೆ ನೀಡುವ ಕೆಲಸಕ್ಕೆ ಮುಂದಾಗಬೇಡಿ ಎಂದರು.
ಈ ಸಂದರ್ಭ ಮಾತನಾಡಿದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ಸುಂದರನಗರದಲ್ಲಿ ಕಳೆದ ೪೦ ವರ್ಷಗಳಿಂದ ಹಲವಾರು ಕುಟುಂಬಗಳು ವಾಸವಿದ್ದು, ಕಳೆದ ೧೫ ವರ್ಷಗಳಿಂದ ಗಣೇಶನ ಪ್ರತಿಷ್ಠಾಪನೆ ಮಾಡುತ್ತಿದ್ದ ಸ್ಥಳಕ್ಕೆ‌ ಸ್ಥಳೀಯರು ಬೇಲಿ ಹಾಕಿಕೊಂಡಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಬೇಲಿ ತೆರವುಗೊಳಿಸಿ ಸ್ಥಳೀಯರ ಭಾವನೆಗೆ ಧಕ್ಕೆಯುಂಟು ಮಾಡಿದ್ದು, ಶಾಸಕರ ಈ ಬಗ್ಗೆ ಸಾರ್ವಜನಿಕರಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.
ಸ್ಥಳೀಯ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್ ಮಾತನಾಡಿ, ಗ್ರಾಮಸ್ಥರ ಸಮಸ್ಯೆ ಬಗ್ಗೆ ಶಾಸಕರಿಗೆ ತಿಳಿಸಲಾಗಿತ್ತು. ಅದರಂತೆ ಸಾರ್ವಜನಿಕರಿಗೆ ತೊಂದರೆ ನೀಡದಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ಥಳೀಯ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಡುವಂತೆ ಮನವಿ ಮಾಡಲಾಗಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳು ಎಂದರು.
ಈ ಸಂದರ್ಭ ಸ್ಥಳೀಯ ಮುಖಂಡರಾದ ಸುಕುಮಾರ್ ಮಾತನಾಡಿ, ಅರಣ್ಯ ಇಲಾಖೆಯವರು ಸ್ಥಳೀಯರಿಗೆ ಕಿರಿಕಿರಿಯುಂಟು ಮಾಡುತ್ತಿದ್ದಾರೆ. ಈ ಬಗ್ಗೆ ಶಾಸಕರು ಗಮನಹರಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಡಬೇಕು ಎಂದರು.
ಈ ಸಂದರ್ಭ ಸ್ಥಳೀಯ ಮುಖಂಡರಾದ ಅಣ್ಣಯ್ಯ, ತಂಬಿ, ರಫೀಕ್, ಹರೀಶ್, ಗಣೇಶ್ ಹಾಗೂ ಗ್ರಾಮಸ್ಥರು ಇದ್ದರು.

Related Articles

One Comment

Leave a Reply

Your email address will not be published. Required fields are marked *

Back to top button
error: Content is protected !!