ಸಭೆ

ನಂಜರಾಯಪಟ್ಟಣದಲ್ಲಿ ಮಕ್ಕಳು, ಮಹಿಳಾ ಗ್ರಾಮಸಭೆ

ಕುಶಾಲನಗರ, ಜ 20:ನಂಜರಾಯಪಟ್ಟಣ ಗ್ರಾಮದ ಪಂಚಾಯಿತಿ ಕಚೇರಿ ಮೇಲ್ಭಾಗದಲ್ಲಿ  ಮಕ್ಕಳ ಮತ್ತು ಮಹಿಳಾ ಗ್ರಾಮ ಸಭೆಯನ್ನು ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ .ಸಿ.ಎಲ್.ವಿಶ್ವ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಮೊದಲಿಗೆ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಮಾಡುವ ಮೂಲಕ ಪ್ರಾರಂಭ ಮಾಡಲಾಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಕುಸುಮ, ಸದಸ್ಯರುಗಳಾದ, ಲೋಕನಾಥ್‌, ಸಮೀರ , ಗಿರಿಜಮ್ಮ  ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಯವರು, ನಂಜರಾಯಪಟ್ಟಣ ಪ್ರೌಢ ಶಾಲಾ ಮತ್ತು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ನಂಜರಾಯಪಟ್ಟಣ ವಿದ್ಯಾರ್ಥಿಗಳು, ಶಿಕ್ಷಕರುಗಳು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಪಶು ಸಖೀಯವರು, ಆರೋಗ್ಯ ಇಲಾಖಾಧಿಕಾರಿಗಳು, ಆಶಾ ಕಾರ್ಯಕರ್ತೆಯವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಈ ಸಭೆಯಲ್ಲಿ ಹಾಜರಿದ್ದರು, ಸಭೆಯಲ್ಲಿ ಮಕ್ಕಳ ರಕ್ಷಣಾ ಹಕ್ಕುಗಳ ಬಗ್ಗೆ , ಕುಂದು ಕೊರತೆಯ ಬಗ್ಗೆ ಚರ್ಚಿಸಲಾಯಿತು ಮತ್ತು ಮಹಿಳೆಯರು ಹಕ್ಕು ಮತ್ತು ಮಹಿಳಾ ರಕ್ಷಣೆಯ ಬಗ್ಗೆ ಮಾತನಾಡಿ ಸಭೆಯನ್ನು ವಂದನಾರ್ಪಣೆಯೊಂದಿಗೆ ಮುಕ್ತಾಯಗೊಳಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!