ಹುಣಸೂರು ತಾ. ಒಕ್ಕಲಿಗರ ಸಂಘದಿಂದ ಆ.26 ಕ್ಕೆ ಕೆಂಪೇಗೌಡ ಜಯಂತಿ ಆಚರಣೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಕ್ರಮದಲ್ಲಿ ಭಾಗಿ
ಕುಶಾಲನಗರ, ಆ 25:ಹುಣಸೂರು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಆ.26 ರ ಶುಕ್ರವಾರದಂದು ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಒಕ್ಕಲಿಗ ಸಂಘದ ತಾಲೂಕು ಅಧ್ಯಕ್ಷ ಕೆ.ಗಣೇಶ್‌ಗೌಡ ತಿಳಿಸಿದರು.
ನಗರದ ಮುನೇಶ್ವರ ಕಾವಲ್ ಮೈದಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದ ಸ್ವಾಮಿಜಿಗಳ ಸಾನಿಧ್ಯದಲ್ಲಿ ನಡೆಯುವ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸುವರು, ಕೆ.ಪಿ.ಪಿ.ಸಿ. ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಉಸ್ತುವಾರಿ ಎಸ್.ಟಿ.ಸೋಮಶೇಖರ್ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಘದ ಖಜಾಂಚಿ ಕಿರಂಗೂರು ಬಸವರಾಜು ಮಾತನಾಡಿ, ಅಂದು ಬೆಳಿಗ್ಗೆ 9ಕ್ಕೆ ಮೈಸೂರು ರಸ್ತೆಯ ಆಂಜನೆಯಸ್ವಾಮಿ ದೇವಸ್ಥಾನದ ಬಳಿಯಿಂದ ಹತ್ತಕ್ಕೂ ಹೆಚ್ಚು ಸಾಂಸ್ಕೃತಿಕ ಕಲಾತಂಡದೊಂದಿಗೆ ಅಲಂಕೃತ ಬೆಳ್ಳಿ ರಥದಲ್ಲಿ ಕೆಂಪೇಗೌಡ ಭಾವಚಿತ್ರ, ಅಡ್ಡ ಪಲ್ಲಕ್ಕಿಯಲ್ಲಿ ಸ್ವಾಮಿಜಿಗಳನ್ನು ಮೆರವಣಿಗೆಯಲ್ಲಿ ಕರೆತರಲಾಗುವುದು. ಶಾಸಕ ಜಿ.ಟಿ.ದೇವೇಗೌಡರು ಮೆರವಣಿಗೆ ಉದ್ಘಾಟಿಸಿ ನಂದಿಕಂಬಕ್ಕೆ ಪೂಜೆ ಸಲ್ಲಿಸುವರು. ಸಮಾರಂಭದಲ್ಲಿ ಮಾಜಿ ಶಾಸಕ ಎಚ್.ವಾಸು ಪ್ರಧಾನ ಭಾಷಣ ಮಾಡಲಿದ್ದು. ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎನ್.ಬಾಲಕೃಷ್ಣ, ಶಾಸಕರಾದ ಎಚ್.ಪಿ.ಮಂಜುನಾಥ್, ಸಾ.ರಾ.ಮಹೇಶ್, ಕೆ.ಮಹದೇವ್, ಅನಿಲ್‌ಚಿಕ್ಕಮಾದು, ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಮಧುಜಿ.ಮಾದೇಗೌಡ, ಮಂಜೇಗೌಡ, ಡಾ.ತಿಮ್ಮಯ್ಯ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ, ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ಕೃಷ್ಣಪ್ಪ, ಮೈಮುಲ್ ನಿರ್ದೇಶಕ ಕೆ.ಎಸ್.ಕುಮಾರ್, ಜಿ.ಪಂ.ಮಾಜಿ ಸದಸ್ಯ ಸಿ.ಟಿ.ರಾಜಣ್ಣ, ಬಿಳಿಕೆರೆ ಹೋಬಳಿ ಒಕ್ಕಲಿಗರ ಸಂಘದ ಅಧ್ಯಕ್ಷ ದೇವರಹಳ್ಳಿಸೋಮಶೇಖರ್, ನಗರಸಭೆ ಅಧ್ಯಕ್ಷೆ ಗೀತಾನಿಂಗರಾಜು ಸೇರಿದಂತೆ ಅನೇಕ ಜನಪ್ರತಿನಿಗಳು ಭಾಗವಹಿಸುವರು. ತಾಲೂಕು ಅಧ್ಯಕ್ಷ ಗಣೇಶ್‌ಗೌಡ ಅಧ್ಯಕ್ಷತೆ ವಹಿಸಲಿದ್ದಾರೆಂದರು.
ಸುದ್ದಿಗೋಷ್ಠಿಯಲ್ಲಿ, ಜಿಲ್ಲಾ ಒಕ್ಕಲಿಗರ ಸಂಘದ ನಿರ್ಧೇಶಕರಾದ ನಾಗಣ್ಣ, ತಾಲೂಕು ನಿದೇರ್ಶಕರಾದ ಸತೀಶ್‌ಪಾಪಣ್ಣ, ಎಚ್.ಎನ್.ಚಂದ್ರಶೇಖರ್, ಉಂಡವಾಡಿ ಚಂದ್ರೇಗೌಡ, ಬಾಲಕೃಷ್ಣ ಇದ್ದರು.