ಕುಶಾಲನಗರ, ಮಾ 12: ಕುಶಾಲನಗರ ತಾಲೂಕು ಆಡಳಿತದ ಆಶ್ರಯದಲ್ಲಿ ಮನೆ ನಿವೇಶನ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ತಹಸೀಲ್ದಾರ್ ಕಛೇರಿ ಆವರಣದಲ್ಲಿ ನಡೆಯಿತು.
ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕಿನಾದ್ಯಂತ 167 ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿದರು.
ಈ ಸಂದರ್ಭ ತಾಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಅಕ್ರಮಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಸದಸ್ಯ ಸಂಜೀವಯ್ಯ, ಕಾಂಗ್ರೆಸ್ ಮುಖಂಡರಾದ ಪ್ರಮೋದ್ ಮುತ್ತಪ್ಪ, ಮಂಜುನಾಥ್ ಗುಂಡುರಾವ್, ಜೋಸೆಫ್ ವಿಕ್ಟರ್ ಸೋನ್ಸ್, ನಟೇಶ್ ಗೌಡ, ಬಿಸಿಎಂ ಇಲಾಖೆ ಅಧಿಕಾರಿ ಮಹಾದೇವಿ, ಜಿಪಂ ಮಾಜಿ ಸದಸ್ಯೆ ಸುನಿತಾ, ಲ್ಯಾಂಪ್ಸ್ ಅಧ್ಯಕ್ಷ ಅರುಣ್ ರಾವ್ ಮತ್ತಿತರರು ಇದ್ದರು.
Back to top button
error: Content is protected !!