ಕುಶಾಲನಗರ, ಫೆ 22:ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ /ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮತ್ತಿ ಗ್ರಾಮದ ಒಂಟಿಯಂಗಡಿ ರಸ್ತೆಯ ಪ್ರೌಢಶಾಲೆ ಮೈದಾನದ ಹತ್ತಿರದ ಬಸ್ಸು ತಂಗುದಾಣದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸೇವನೆ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಿ: 20-02-2026 ರಂದು ದಾಳಿ ನಡೆಸಿ 02 ಆರೋಪಿಗಳನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.
ಸದರಿ ಆರೋಪಿಗಳ ವಿರುದ್ಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 20(b)(2)(b) NDPS Act ಅಡಿಯಲ್ಲಿ ಪ್ರಕರಣ ದಾಖಲಿಸಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಆರೋಪಿಗಳ ವಿವರ;
1. ಅಸೈನಾರ್ @ ರಜಾಕ್, 43 ವರ್ಷ, ಸುಣ್ಣದ ಬೀದಿ ವಿರಾಜಪೇಟೆ ನಗರ.
2. ಮೋಹನ ಎ.ಜಿ @ ಅಶೋಕ, 42 ವರ್ಷ, ಬಾಳುಗೋಡು ಗ್ರಾಮ, ಬಿಟ್ಟಂಗಾಲ, ವಿರಾಜಪೇಟೆ ತಾ||.
ವಶಪಡಿಸಿಕೊಂಡ ಸ್ವತ್ತುಗಳ ವಿವರ;
1 ಕೆಜಿ 60 ಗ್ರಾಂ ಗಾಂಜಾ.
Back to top button
error: Content is protected !!