ಪ್ರಕಟಣೆ

ನಾಣಚ್ಚಿ ಗೇಟ್ ಹಾಗೂ ವೀರನಹೊಸಹಳ್ಳಿ ಗೇಟ್ ನಿಂದ ಇಲಾಖಾ ಸಫಾರಿ ಸ್ಥಗಿತ

ಕುಶಾಲನಗರ, ಮೇ 27: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಕಾರಣದಿಂದ, ಸಫಾರಿ ವಾಹನಗಳು ನಾಗರಹೊಳೆ ವನ್ಯಜೀವಿ ವಲಯದ ಸಫಾರಿ zone ನ ರಸ್ತೆಗಳಲ್ಲಿ ಸಂಚರಿಸುವುದು ಕಷ್ಟಸಾಧ್ಯವಾಗಿರುತ್ತದೆ. ಈ ಕಾರಣದಿಂದ, ದಿನಾಂಕ 28/05/2025 ರಿಂದ ಮಳೆ ನಿಲ್ಲುವವರೆಗೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಾಣಚ್ಚಿ ಗೇಟ್ ಹಾಗೂ ವೀರನಹೊಸಹಳ್ಳಿ ಗೇಟ್ ನಿಂದ ಇಲಾಖಾ ಸಫಾರಿಯನ್ನು ನಿಲ್ಲಿಸಲಾಗಿರುತ್ತದೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ದಮ್ಮನಕಟ್ಟೆ (ಕಬಿನಿ) ಸಫಾರಿ ಎಂದಿನಂತೆ ಮುಂದುವರೆಯುತ್ತದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!