ಸಭೆ

ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕುಶಾಲನಗರ ಫೆ. 23: ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ಕುಶಾಲನಗರ ಪುರಸಭೆಯ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮೊದಲಿಗೆ ಹಿಂದಿನ ಪ್ರಗತಿ ಪರಿಶೀಲನ ಸಭೆಯ ಅನುಷ್ಠಾನ ವರದಿಯನ್ನು ಓದುವ ಮೂಲಕ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಯಿತು. ಹಾಜರಿದ್ದ ಅಧಿಕಾರಿಗಳೊಂದಿಗೆ ಹಿಂದಿನ ಅನುಪಾಲನ ವರದಿಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯೊಂದಿಗೆ ಚರ್ಚೆಗಳು ನಡೆದವು.
ಮೊದಲಿಗೆ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದ ಅಧಿಕಾರಿ ಸಭೆಗೆ ಬಾರದೆ ಸಮಗ್ರವಾದ ಅನುಪಾಲನಾ ವರದಿಯನ್ನು ನೀಡಿದೆ, ಆರೆ ಕಾಲಿಕ ಸಿಬ್ಬಂದಿಯನ್ನು ಸಭೆಗೆ ಕಳುಹಿಸಿರುವ ಬಗ್ಗೆ ಚರ್ಚೆ ನಡೆದು ಸಂಬಂಧಿಸಿದ ಜಿಲ್ಲಾ ಮತ್ತು ರಾಜ್ಯ ಮಟ್ಟದ ಕಾರ್ಯದರ್ಶಿಗೆ ದೂರು ನೀಡಲು ತೀರ್ಮಾನಿಸಲಾಯಿತು.
ಚೆಸ್ಕಾಂ ನೂತನ ಶಾಖಾ ಕಛೇರಿಯನ್ನು ತೆರಯುವ ಮೂಲಕ ಗ್ರಾಮಾಂತರ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧವಾಗಿ ನೂತನ ಕಛೇರಿಯನ್ನು ತೆರೆಯಲು ಸಂಬಂಧಿಸಿದ ಇಲಾಖೆಯ ವ್ಯವಸ್ಥಾಪಕರಿಗೆ ಪತ್ರವ್ಯವಹಾರ ಮಾಡುವ ಬಗ್ಗೆ ಸಭೆಯಲ್ಲಿ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಯಿತು.
ಅಧ್ಯಕ್ಷತೆ ವಹಿಸಿದ ವಿ.ಪಿ.ಶಶಿಧರ್ ಮಾತನಾಡಿ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 75 ವರ್ಷ ತುಂಬಿದ ಒಬ್ಬರೇ ಇರುವಂತಹ ಪಡಿತರದಾರನಿಗ ಮನೆಯ ಬಾಗಿಲಿಗೆ ಪಡಿತರ ವಸ್ತುಗಳನ್ನು ತಲುಪಿಸುವ ಹೊಸ ಯೋಜನೆಯಲ್ಲಿ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ 37 ಮಂದಿ ಇದ್ದು ಅವರಿಗೆ ಈಗಾಗಲೇ ಮನೆಯ ಬಾಗಿಲಿಗೆ ಪಡಿತರ ವಸ್ತುಗಳನ್ನು ಸಂಬಂಧಿಸಿದಂತೆ ಇಲಾಖೆಯ ಮೂಲಕ ತಲುಪಿಸಲಾಗುತ್ತಿದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜೊತೆಯಲ್ಲಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಚ್ಚುವರಿ ಸಾರಿಗೆ ಸಂಪರ್ಕದ ವ್ಯವಸ್ಥೆ ಮತ್ತು ಯೋಜನೆಯಲ್ಲಿ ಪಲಾನುಭವಿಗಳು ಹೆಚ್ಚಾಗಿರುವ ಬಗ್ಗೆ, ಇನ್ನೂ ಬಾಕಿ ಇರುವ ಫಲಾನುಭವಿಗಳ ಸಂಖ್ಯೆಗಳ ಬಗ್ಗೆ ಹಾಜರಿದ್ದ ಅಧಿಕಾರಿಗಳೊಂದಿಗೆ ಸವಿಸ್ತಾರವಾದ ಚರ್ಚೆಗಳು ನಡೆದವು.

ಸಭೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ಸದಸ್ಯ ಅಣ್ಣಯ್ಯ,
ತಾಲ್ಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣೇ ಗೌಡ , ಶ್ರೀನಿವಾಸ ,ಅಬ್ದುಲ್ ರಜಾಕ್, ರಫೀಕ್ ಖಾನ್‌ , ಆದಂ, ಮಲ್ಲಿಕಾರ್ಜುನ, ಮುಸ್ತಫಾ, ಫಿಲೋಮಿನಾ, ರಾಜಶೇಖರ, ಕಿಶೋರ್, ಸುಹಾದ್ ಆಶ್ರಫ್ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!