ಆರೋಪ

ಬೀದಿಬದಿ ವ್ಯಾಪಾರಿಗಳಿಂದ ಸುಂಕ ವಸೂಲಿ ಕ್ರಮಕ್ಕೆ‌ ವ್ಯಾಪಾರಿಗಳ ಖಂಡನೆ

ಕುಶಾಲನಗರ, ಮಾ 02:ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಸುಂಕ ವಸೂಲಿ ಕ್ರಮವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವ್ಯಾಪಾರಿಗಳು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ದೈನಂದಿನ ಜೀವನೋಪಾಯಕ್ಕೆ ಅವಲಂಬಿಸಿರುವ ಸಣ್ಣ ವ್ಯಾಪಾರಿಗಳಿಗೆ ಈ ಸುಂಕದಿಂದ ಆರ್ಥಿಕ ಒತ್ತಡ ಹೆಚ್ಚುತ್ತಿದೆ ಎಂದು ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು ಸಮಸ್ಯೆಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ವ್ಯಾಪಾರಿಗಳು ಒತ್ತಾಯಿಸಿದ್ದಾರೆ. ಬೇಡಿಕೆಗೆ ಸ್ಪಂದಿಸದಿದ್ದರೆ ಪ್ರತಿಭಟನೆ ನಡೆಸಲು ಮುಂದಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಆದಂ ಎಸ್ ಮಾತನಾಡಿ, ವ್ಯಾಪಾರಸ್ಥರ ಮೇಲೆ ಸುಂಕ ಹೇರಿಕೆ ನಿರ್ಧಾರವನ್ನು ಯಾವುದೇ ಕಾರಣಕ್ಕೂ ನಾವು ಸಹಿಸಲ್ಲ. ಶಾಸಕರ ಗಮನಕ್ಕೂ ಕೂಡ ನಾವು ತರುತ್ತೇವೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರವನ್ನು ಬಿಡುವುದು ಸರಿಯಲ್ಲ ಎಂದು ತಿಳಿಸಿದರು.

ಬೀದಿ ಬದಿ ವ್ಯಾಪಾರಿಗಳ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಲೀನಾ ಮಾತನಾಡಿ, ಅಧಿಕಾರಿಗಳು ನಮ್ಮ ಗಮನಕ್ಕೆ ತರದೆ ಏಕಾಏಕಿಯಾಗಿ ಇಂತಹ ನಿರ್ಧಾರಗಳನ್ನು ತೆಗೆದುಕೊಂಡಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಿಳಿಸಿದರು.
ಬೀದಿಬದಿ ವ್ಯಾಪಾರಿಗಳ ಒಕ್ಕೂಟದ
ಜಿಲ್ಲಾಧ್ಯಕ್ಷ ಜಗದೀಶ್ ಮಾತನಾಡಿ, ಇಂತಹ ಬಡವರ ವಿರೋಧಿ ನಿರ್ಧಾರಗಳ ನಾವು ಎಂದಿಗೂ ಸಹಿಸಲ್ಲ. ಮತ್ತೊಮ್ಮೆ ಪರಿಶೀಲನೆ ಮಾಡಿ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಸ್ಥರು ಹಾಜರಿದ್ದರು

Related Articles

Leave a Reply

Your email address will not be published. Required fields are marked *

Back to top button
error: Content is protected !!