ಕುಶಾಲನಗರ,ಮಾ 13: ಮಹಿಳಾ ದಿನಾಚರಣೆಯು ಕೇವಲ ಸಂಭ್ರಮದ ದಿನವಲ್ಲ. ಅದು ಈ ಹಿಂದೆ ಅಬಲೆಯೆಂದು ಕರೆಸಿಕೊಂಡವರು ಸಬಲೆಯಾಗಿ, ಉತ್ತಮ ಆಡಳಿತಗಾರ್ತಿಯಾಗಿ ಹೊರಹೊಮ್ಮಿದ ಕ್ರಾಂತಿಕಾರಿ ಹಾದಿಯ ಸ್ಮರಣೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ ಹೇಳಿದರು.
ಕುಶಾಲನಗರ
ಪುರಸಭೆ ವತಿಯಿಂದ
ಪುರಸಭಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಸಂಸಾರದ ಕಣ್ಣು, ಹೆಣ್ಣೆಂದರೆ ಮನೆಯ ಬೆಳಗುವ ದೀಪ. ನಾಲ್ಕು ಗೋಡೆಗೆ ಸೀಮಿತವಾಗಿದ್ದ ಹೆಣ್ಣು ಇಂದು ಪಾಲ್ಗೊಳ್ಳದ ಕ್ಷೇತ್ರವಿಲ್ಲ. ಎಲ್ಲಾ ಕ್ಷೇತ್ರದಲ್ಲಿ ಗಂಡಿಗೆ ಸಮಾನವಾಗಿ ನಿಂತಿದ್ದಾಳೆ. ತನ್ನದೇ ಛಾಪು ಮೂಡಿಸಿ ತಾನು ಯಾರಿಗೂ ಕಡಿಮೆ ಇಲ್ಲ ಎನ್ನುವುದನ್ನು ಸಾಬೀತು ಪಡಿಸಿದ್ದಾಳೆ ಎಂದರು.
ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಮಾತನಾಡಿ, ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವನದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಮಹಿಳೆಯರು ಈಗ ಅಬಲೆ ಅಲ್ಲ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅವಳ ಸಾಧನೆ ಅಮೋಘವಾದುದು. ಪುರುಷರ ಏಳಿಗೆಯಲ್ಲಿ ಮಹಿಳೆಯ ಪಾತ್ರ ಯಾವತ್ತೂ ಇರುತ್ತದೆ ಎಂದರು.
ದಂತ ವೈದ್ಯೆ ಡಾ. ಅಂಜಲಿ ಮಾತನಾಡಿ, ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಪುರಸಭೆ ವ್ಯವಸ್ಥಾಪಕಿ ಸವಿತಾ, ಆರೋಗ್ಯ ನಿರೀಕ್ಷಕ ಉದಯಕುಮಾರ್,
ಕಂದಾಯ ಅಧಿಕಾರಿ ರಾಮು,
ಪೌರಸೇವಾ ಸಂಘದ ಅಧ್ಯಕ್ಷ ಧನಂಜಯ, ಉಪಾಧ್ಯಕ್ಷೆ ರಶ್ಮಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಪುರಸಭಾ ಸಿಬ್ಬಂದಿಗಳು ಪೌರ ಕಾರ್ಮಿಕರು ಹಾಜರಿದ್ದರು.
Back to top button
error: Content is protected !!