ಕುಶಾಲನಗರ, ಮಾ 18: ಕೊಡಗು ವಿಶ್ವವಿದ್ಯಾಲಯ ವತಿಯಿಂದ ಅಂತರ ಕಾಲೇಜು ಚೆಸ್ ಪಂದ್ಯಾವಳಿಯನ್ನು ಕುಶಾಲನಗರದ ಎಂ.ಜಿ.ಎಂ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಲಿಖಿತಾ ಟಿ.ಎ ಅವರು ಅಧ್ಯಕ್ಷತೆ ವಹಿಸಿದ್ದರು ಮತ್ತು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಛೇರಿ ಅಧೀಕ್ಷಕರಾದ ಮಹೇಶ್ ಆಮೀನ್ ಹಾಗೂ ದೈಹಿಕ ನಿರ್ದೇಶಕರಾದ ದಿನೇಶ್ ಕುಮಾರ್ , ಜಾನ್ ಪೋಲ್ , ಗಣಕ ವಿಭಾಗ ಉಪನ್ಯಾಸಕರುಉಪಸ್ಥಿತರಿದ್ದರು.
ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ವಿದ್ಯಾರ್ಥಿಗಳ ವಿಭಾಗದಲ್ಲಿ ಕುಶಾಲನಗರದ ಎಂ.ಜಿ.ಎಂ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ಮಡಿಕೇರಿಯ ಎಫ್.ಎಂ.ಕೆ ಸಿ ಪದವಿ ಕಾಲೇಜು , ಮಡಿಕೇರಿ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದರು.
ವಿದ್ಯಾರ್ಥಿನಿಯರ ವಿಭಾಗದಲ್ಲಿ ಮಡಿಕೇರಿಯ ಎಫ್ ಎಂ ಕೆ ಎಂ ಸಿ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದುಕೊಂಡರು. ಕುಶಾಲನಗರದ ಎಂ.ಜಿ.ಎಂ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಗಳಿಸಿದರು.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಎಂಜಿಎಂ ಕಾಲೇಜು ಸಭಾಂಗಣದಲ್ಲಿ ಗಣ್ಯರು ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದರು. ಈ ಚೆಸ್ ಪಂದ್ಯಾವಳಿ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಚಿಂತನಾ ಸಾಮರ್ಥ್ಯವನ್ನು ವೃದ್ಧಿಸುವಲ್ಲಿ ಸಹಾಯಕವಾಗಿದೆ. ನಿರೂಪಣೆ ದೇವೇಂದ್ರರವರು ವಾಣಿಜ್ಯ ಉಪನ್ಯಾಸಕರು
Back to top button
error: Content is protected !!