ಕುಶಾಲನಗರ, ಆ 28: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ವ್ಯಕ್ತಿತ್ವ ವಿಕಸನ ಸಾಧ್ಯ. ಇದು ಕೇವಲ ಸರ್ಕಾರದ ಕಾರ್ಯಕ್ರಮವಲ್ಲ, ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ಹಬ್ಬ.
ಆದ್ದರಿಂದ ಎಲ್ಲರೂ ಉತ್ಸಾಹದಿಂದ ಭಾಗವಹಿಸಬೇಕು ಎಂದು ಹೆಬ್ಬಾಲೆ ಶಾಲೆಯ ಎಸ್.ಡಿ.ಎಂ.ಸಿ.ಯ ಉಪಾಧ್ಯಕ್ಷೆ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಸ್ ಬಿ ಜ್ಯೋತಿಯವರು ಇಂದಿಲ್ಲಿ ಹೇಳಿದರು.
ಇಲ್ಲಿಗೆ ಸಮೀಪದ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕ್ಲಸ್ಟರ್ ಕೇಂದ್ರ ಹೆಬ್ಬಾಲೆ ಇವರ ಸಹಯೋಗದಲ್ಲಿ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮೊದಲಿಗೆ ಶಾಲಾ ಮಕ್ಕಳಿಂದ ಪ್ರಾರ್ಥನೆಯಾಯಿತು ಸಿ.ಆರ್.ಪಿ ಆದರ್ಶ್ ಸರ್ವರನ್ನು ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಹೆಚ್ ಎಂ ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡುತ್ತ ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ ಪ್ರತಿಭೆಗೆ ಬೆಲೆಕಟ್ಟಲಾಗದು ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡಿ ಎಂದರು.
ಬಿ ಈ ಓ ಕಚೇರಿಯ ಪರವಾಗಿ ಬಿ ಆರ್ ಪಿ ಲೋಕೇಶ್ ಹಾಜರಿದ್ದು ದಿನದ ಮಹತ್ವ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಹೆಬ್ಬಾಲೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ನಾರಾಯಣ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮಂಜುನಾಥ್ ಮುಖ್ಯ ಶಿಕ್ಷಕರುಗಳಾದ ಸೂರ್ಯನಾರಾಯಣ್. ಕಾಮಾಕ್ಷಿ. ರಮೇಶ್ ಚಂದ್ರು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಕರುಂಬಯ್ಯ. ಸಿ.ಆರ್ ಪಿ ಶಾಂತಕುಮಾರ್. ಎಸ್ ಡಿ ಎಂ ಸಿ ಸದಸ್ಯರಾದ ಅಮೃತ ಉಪಸ್ಥಿತರಿದ್ದರು. ನಂತರ ನಿಗದಿಪಡಿಸಿದ ಕೊಠಡಿಗಳಲ್ಲಿ ಶಾಲಾ ಮಕ್ಕಳಿಂದ ಯಕ್ಷಗಾನ ಹಾಸ್ಯ ಮಿಮಿಕ್ರಿ ಭಾವಗೀತೆ ಜಾನಪದ ಗೀತೆ ಕನ್ನಡ ಭಾಷಣ ಭರತನಾಟ್ಯ ರಂಗೋಲಿ ಚರ್ಚಾ ಸ್ಪರ್ಧೆ ಡ್ರಾಯಿಂಗ್ ಮತ್ತು ಕ್ವಿಜ್ ಕಾರ್ಯಕ್ರಮಗಳು ನಡೆದವು.
Back to top button
error: Content is protected !!