ಪ್ರಕಟಣೆ

ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ಅವಹೇಳನ ಪ್ರಕರಣ – ವಿಶ್ವ ಹಿಂದೂ ಪರಿಷತ್ ಖಂಡನೆ

ಕುಶಾಲನಗರ, ಮಾ 31: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ಅವಹೇಳನ ಪ್ರಕರಣವನ್ನು ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಖಂಡಿಸಿದೆ. ಹಿಂದೂ ಧಾರ್ಮಿಕ ನಂಬಿಕೆಯನ್ನು, ಶ್ರದ್ಧೆಯನ್ನು ಅವಹೇಳನ ಮಾಡುವ ರೀತಿಯಲ್ಲಿ ಅನ್ಯ ಧರ್ಮದ ದುಷ್ಟಕೂಟ ತಂಡ ವೀಡಿಯೋ ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದು ಅಕ್ಷಮ್ಯ ಅಪರಾಧವಾಗಿದ್ದು ಈ ದುಷ್ಕೃತ್ಯವನ್ನು ವಿಶ್ವಹಿಂದೂಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲದೆ ಸಂಘಟನೆಯೂ ದೈವ ಆರಾಧಕರ ಬೆಂಬಲಕ್ಕೆ ಸದಾ ನಿಲ್ಲುತ್ತದೆ.

ದುಷ್ಕೃತ್ಯ ಎಸಗಿದ ಆರೋಪಿಗಳನ್ನು ಕಾನೂನುಡಿಯಲ್ಲಿ ಶಿಕ್ಷಿಸುವ ಮೂಲಕ ಸಮಾಜಘಾತುಕ ಶಕ್ತಿಗಳನ್ನು ಪೋಲೀಸ್ ಇಲಾಖೆಯೇ ಸದೆ ಬಡಿಯಬೇಕು. ಹಿಂದೂ ಧರ್ಮವನ್ನು, ಹಿಂದೂ ಸಂಸ್ಕೃತಿಯನ್ನು, ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯನ್ನು ತರುವಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ಮುಸಲ್ಮಾನರು ಅಧಿಕವಾಗಿ ವಾಸಿಸುತ್ತಿರುವ ಕಡೆಗಳಲ್ಲಿ ಹೆಚ್ಚು ಹೆಚ್ಚು ನಡೆಯುತ್ತಿದೆ. ಪೋಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದೇ ರೀತಿ ಮುಂದುವರಿದರೆ ಹಿಂದೂ ಸಮಾಜವು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ.ತಕ್ಕ ಪ್ರತಿರೋಧವನ್ನು ಅನಿವಾರ್ಯವಾಗಿ ನೀಡಬೇಕಾಗುತ್ತದೆ. ಹಿಂದೂಗಳ ತಾಳ್ಮೆಯನ್ನು ಅನ್ಯರು ದೌರ್ಬಲ್ಯವೆಂದು ಭಾವಿಸಿದಂತಿದೆ. ಹಿಂದೂ ವಿರೋಧಿ ಕೃತ್ಯಗಳು ಎಲ್ಲೇ ನಡೆದರೂ ತಕ್ಕ ಪ್ರತ್ಯುತ್ತರವನ್ನು ಕೊಡುವ ಸಾಮರ್ಥ್ಯ ಹಿಂದೂ ಸಮಾಜಕ್ಕಿದೆ ಎನ್ನುವ ಎಚ್ಚರಿಕೆಯನ್ನು ಈ ಮೂಲಕ ನೀಡುತ್ತಿದ್ದೇವೆ ಎಂದು ವಿಹೆಚ್ಪಿ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!