ಕಾರ್ಯಕ್ರಮ

ಭೂಮಿಕಾ ಮಹಿಳಾ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಮಹಿಳಾ ದಿನಾಚರಣೆ

ಕುಶಾಲನಗರ, ಮಾ 31: ಕುಶಾಲನಗರದ ಭೂಮಿಕಾ ಮಹಿಳಾ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಕನ್ನಿಕಾ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಮಡಿಕೇರಿ ಕ್ಷೇತ್ರ ಶಾಸಕ‌ ಡಾ.ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,‌ಬಹುತೇಕ‌ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ‌ ತೋರಿದ್ದಾರೆ, ತೋರುತ್ತಿದ್ದಾರೆ. ಸಮಾಜದಲ್ಲಿ ಉತ್ತಮ‌ ಸ್ಥಾನ ಮಾನ ಹೊಂದುತ್ತಿರುವುದು ಉತ್ತಮ ಬೆಳವಣಿಗೆ.
ಮನೆಯೊಂದಿಗೆ ಸಮಾಜದ ಏಳಿಗೆಯಲ್ಲಿ‌‌ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವಲ್ಲಿ‌ ಪೋಷಕರು ಆಸಕ್ತಿ ತೋರಿಸಿ ಪ್ತೋತ್ಸಾಹಿಸಬೇಕಿದೆ ಎಂದರು. ಸರಕಾರ ಕೂಡ ಮಹಿಳೆಯರಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು ಅದರ ಸದುಪಯೋಗ ‌ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕಿದೆ. ರಾಜಕೀಯವಾಗಿ ಕೂಡ ಸಾಧನೆ ತೋರಬೇಕಿದೆ ಎಂದು ಕರೆ ನೀಡಿದರು.

ಅತಿಥಿಗಳಾಗಿ ಪಾಲ್ಗೊಂಡಿದ್ದ
ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಸಾಹಿತಿ ಫ್ಯಾನ್ಸಿ ಮುತ್ತಣ್ಣ ಮಾತನಾಡಿದರು.

ವೇದಿಕೆ ಅಧ್ಯಕ್ಷೆ ಫಿಲೋಮಿನಾ
ಅಧ್ಯಕ್ಷತೆ ವಹಿಸಿದ್ದರು.

ನಿವೃತ್ತ ಪ್ರಾಂಶುಪಾಲೆ ಡಾ.ಶಾಂತಲಕ್ಷ್ಮಿ ರವಿಕುಮಾರ್ ಮುಖ್ಯ ಭಾಷಣ ಮಾಡಿದರು.

ವಿವಿಧ ಕ್ಷೇತ್ರಗಳ
ಮಹಿಳಾ ಸಾಧಕರಾದ ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ಆಹಾರ ನಿರೀಕ್ಷಕಿ ಎಂ.ಎಸ್. ಸ್ವಾತಿ, ರೈತ ಮಹಿಳೆ ಜಯಮ್ಮ ಜವರೇಗೌಡ, ಪಶುವೈದ್ಯಾಧಿಕಾರಿ ಡಾ. ಅಮೃತ ಎಂ.ಮಹದೇವಪ್ಪ, ಕ್ರೀಡಾಪಟು ಶೈಲಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಬಿ.ಆರ್.ನಾಗೇಂದ್ರಪ್ರಸಾದ್ ಸೇರಿದಂತೆ ವೇದಿಕೆ ಕಾರ್ಯದರ್ಶಿ ಪದ್ಮಾವತಿ, ಸಲಹೆಗಾರರಾದ ವನಿತಾ ಚಂದ್ರಮೋಹನ್, ಪ್ರಮುಖರಾದ ಶಾಂತಿ ಗಣೇಶ್, ಜೂಲಿ‌ಮೇರಿ, ಲಲಿತಾ, ನವಮಣಿ, ವನಿತಾ, ಉಷಾ, ಜರೀನಾ, ಜಯಶ್ರೀ ಸುನಂದ, ನಿರ್ಮಲಾ ಮತ್ತಿತರರು ಹಾಜರಿದ್ದರು.
ಇದೇ ಸಂದರ್ಭ 21 ಮಹಿಳಾ ಫಲಾನುಭವಿಗಳಿಗೆ ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಒದಗಿಸಿದ ಹೊಲಿಗೆ ಯಂತ್ರಗಳನ್ನು ಶಾಸಕರು ವಿತರಣೆ ಮಾಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!