ಪ್ರಕಟಣೆ

ಏ.08 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ

ಕುಶಾಲನಗರ ಏ.02:-ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಏಪ್ರಿಲ್, 08 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!