ಕಾರ್ಯಕ್ರಮ

ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ

ಕುಶಾಲನಗರ, ಏ 02: ಕಾವೇರಿ ಮಹಾ ಆರತಿ ಅಂಗವಾಗಿ ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ ವಲಯದ ನೂರಾರು ಸಂಖ್ಯೆಯ ಕಾರ್ಯಕರ್ತರು ಕಾವೇರಿ ನದಿಯಲ್ಲಿ ಸಾರ್ವಜನಿಕರು ಎಸೆದಿದ್ದ ರಾಶಿಗಟ್ಟಲೆ ಬಟ್ಟೆ ಬರೆ ವಿವಿಧ ತ್ಯಾಜ್ಯಗಳನ್ನು ತೆರವುಗೊಳಿಸಿ ಪುರಸಭೆ ವಾಹನದಲ್ಲಿ ತುಂಬಿಸಿ ಸ್ಥಳಾಂತರಿಸಿದರು.
ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಉಪಸ್ಥಿತಿಯಲ್ಲಿ ಕುಶಾಲನಗರ ವಲಯ ಮೇಲ್ವಿಚಾರಕರಾದ ನಾಗರಾಜ್, ಒಕ್ಕೂಟದ ಅಧ್ಯಕ್ಷರಾದ ಪಾರ್ವತಿ ಉಪಾಧ್ಯಕ್ಷರಾದ ದಾಕ್ಷಾಯಿಣಿ ನೇತೃತ್ವದಲ್ಲಿ ಸೇವಾ ಪ್ರತಿನಿಧಿಗಳು ಶೌರ್ಯ ತಂಡದ ಸದಸ್ಯರು, ಯೋಜನೆಯ ಕಾರ್ಯಕರ್ತರು ಸುಮಾರು 2 ಗಂಟೆಗಳ ಕಾಲ ನದಿಯನ್ನು ತ್ಯಾಜ್ಯ ತೆರವುಗೊಳಿಸುವ ಮೂಲಕ ಸ್ವಚ್ಛಗೊಳಿಸಿದರು.
ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ ಎನ್ ಚಂದ್ರಮೋಹನ್, ಕಾವೇರಿ ಆರತಿ ಬಳಗದ ವನಿತಾ ಚಂದ್ರಮೋಹನ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ ಸೋಮಯ್ಯ, ಸೇವಾ ಪ್ರತಿನಿಧಿಗಳಾದ ಸ್ವಾತಿ, ಜಯಲಕ್ಷ್ಮಿ, ಡಾಟಿ, ಪುರಸಭೆ ಸಿಬ್ಬಂದಿ ಗಣೇಶ್ ಮತ್ತು ಶೌರ್ಯ ತಂಡದ ಗಿರೀಶ್, ಶಿವಕುಮಾರ್, ಲಲಿತ ಹಾಗೂ ಕಾರ್ಯಕರ್ತರು ಇದ್ದರು.
ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಡಾ ವೀರೇಂದ್ರ ಹೆಗ್ಗಡೆ ಅವರ ಧರ್ಮಪತ್ನಿ ಹೇಮಾವತಿ ಅಮ್ಮನವರ ಹುಟ್ಟು ಹಬ್ಬದ ಅಂಗವಾಗಿ ಕುಶಾಲನಗರದ ವಲಯ ಕಾರ್ಯಕರ್ತರು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.
ಈ ಸಂದರ್ಭ ವೈದ್ಯಾಧಿಕಾರಿ ಮಧುಸೂದನ್, ಅಧಿಕಾರಿ ಡಾ ಚೇತನ್ ಜನಜಾಗೃತಿ ವೇದಿಕೆ ಸದಸ್ಯರಾದ ಚಂದ್ರು, ಯೋಜನೆ ಮೇಲ್ವಿಚಾರಕರಾದ ನಾಗರಾಜ್ ಸ್ವಾತಿ ಜಯಲಕ್ಷ್ಮಿ ಡಾಟಿ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!