ಕಾರ್ಯಕ್ರಮ

ಕುಶಾಲನಗರದಲ್ಲಿ ಬಾಬು ಜಗಜೀವನರಾಂ ಜನ್ಮದಿನಾಚರಣೆ ಕಾರ್ಯಕ್ರಮ

ಕುಶಾಲನಗರ, ‌ಏ 05: ಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಸಿರು ಕ್ರಾಂತಿ ಹರಿಕಾರ,‌ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಂ 119ನೇ ಜನ್ಮದಿನಾಚರಣೆ ಸಮಾರಂಭ ಕಲಾಭವನದಲ್ಲಿ ನಡೆಯಿತು.

ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಸಾಲಿಗ್ರಾಮದ ಉಪನ್ಯಾಸಕ ನಾಗರಾಜು ಬೀಜಗನಹಳ್ಳಿ ಮುಖ್ಯ ಭಾಷಣ ಮಾಡಿದರು.

ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರಾಕೇಶ್,
ಡಿಎಸ್ಎಸ್ ಮುಖಂಡ
ಕೆ.ಬಿ.ರಾಜು, ಪುರಸಭೆ ಆರೋಗ್ಯ ನಿರೀಕ್ಷಕ ಉದಯಕುಮಾರ್, ವಿವಿಧ ಸಂಘಟನೆಗಳ ಮುಖಂಡರಾದ ದಾಮೋದರ್, ವೆಂಕಟೇಶ್, ಲೋಕೇಶ್ ಕುಂಡಾರಿ, ಹೆಚ್.ಟಿ.ವಸಂತ, ಡಾ.ಹರ್ಷಿತ, ಗಂಗಾಧರ,
ಸಮಾಜ ಕಲ್ಯಾಣ ತಾಲೂಕು ಸಹಾಯಕ ನಿರ್ದೇಶಕ ಸಿದ್ದೇಗೌಡ, ವಾರ್ಡನ್ ಮಧು ಸೇರಿದಂತೆ ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!