ಕುಶಾಲನಗರ, ಏ 07: ಏ.01 ರಿಂದ ಆರಂಭವಾಗಿರುವ ಜನಗಣತಿಯಲ್ಲಿ ಕೊಡಗಿನ ಸರ್ವ ನಾಗರಿಕರು ಕಡ್ಡಾಯವಾಗಿ ಪಾಲ್ಗೊಂಡು ಮಾಹಿತಿ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಅವರು ಕೋರಿದ್ದಾರೆ.
ಕುಶಾಲನಗರ ಪುರಸಭೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ, ಎಸ್ಟಿಪಿ, ಟಿಎಸ್ಪಿ ಅನುದಾನ ಮಂಜೂರಾತಿ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಗಣತಿ ಸಹಕಾರಿಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಜನಗಣತಿಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು.
ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ತಹಸೀಲ್ದಾರ್ ಕಿರಣ್ ಜಿ ಗೌರಯ್ಯ, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಇದ್ದರು.
Back to top button
error: Content is protected !!