ಕುಶಾಲನಗರ, ಏ 13: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆಗೆ ಮೂರನೇ ಸ್ಥಾನ ಪಡೆದ ವಿದ್ಯಾರ್ಥಿಯನ್ನು ಕರವೇ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ವಿಕಾಸ್ ಎಸ್ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಶೇಕಡ 97 ರಷ್ಟು ಅಂಕವನ್ನು ಪಡೆದು ಜಿಲ್ಲೆಗೆ ಮೂರನೇ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಗ್ರಾಮೀಣ ಭಾಗದ ರೈತ ಕುಟುಂಬದಲ್ಲಿ ಜನಿಸಿದ ವಿಕಾಸ್ ಎಸ್ ವಿದ್ಯಾರ್ಥಿಗೆ ಗೌರವಯುತ ಸನ್ಮಾನವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ದೀಪಕ್ ಕನ್ನಡಿಗ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಸಿ ಎಂ ಆಸಿಫ್, ಮಡಿಕೇರಿ ವಿಧಾನಸಭಾ ಅಧ್ಯಕ್ಷ ಆನಂದದ ಕನ್ನಡಿಗ, ನಗರ ಅಧ್ಯಕ್ಷ ಯೋಗೇಶ್ ಡಿ.ಆರ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಪುನೀತ್, ಜಿಲ್ಲಾ ಕಾರ್ಯದರ್ಶಿ ಸಂದೀಪ್ ಪೆಂಗ್ವಿನ್, ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೃತಿ ಗಿರೀಶ್, ತಾಲ್ಲೂಕು ಉಪಾಧ್ಯಕ್ಷ ಪರಮೇಶ್ (ಮಂಡ್ಯ ),ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಂಜಪ್ಪ, ಕಾರ್ಯದರ್ಶಿ ಮುರುಳಿ,ನಗರ ಉಪಾಧ್ಯಕ್ಷ ರವಿ ಡಿ,ಎನ್, ಜೈ ಸ್ವಾಮಿ, ಪವನ್, ಮಂಜು, ಗಿರಿ ಪ್ರಸಾದ್,ವಿವಿಧ ಘಟಕದ ಸರ್ವ ಸದಸ್ಯರು ಉಪಸ್ಥಿತರಿದ್ದರು.
Back to top button
error: Content is protected !!