ಕುಶಾಲನಗರ, ಏ 14: ಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಸಮಾರಂಭ ನಡೆಯಿತು.
ವೇದಿಕೆ ಸಮಾರಂಭಕ್ಕೂ ಮುನ್ನ ತೆರೆದ ವಾಹನದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.
ಕಲಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು
ತಹಸೀಲ್ದಾರ್ ಕಿರಣ್ ಜಿ.ಗೌರಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಮಾಜಿಕ ಕ್ರಾಂತಿಯ ಹರಿಕಾರರಾದ, ನಡೆದಾಡುವ ವಿಶ್ವಕೋಶದಂತಿದ್ದ ಡಾ.ಬಿ.ಆರ್.ಅಂಬೇಡ್ಕರ್ ಇಂದಿಗೂ ಮನೆಮನಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಮಹಾನ್ ಚೇತನ ಎಂದು ಬಣ್ಣಿಸಿದರು. ಇವರ ಜೀವನ, ಕಾಂತ್ರಿ, ಪಾಂಡಿತ್ಯ, ಹೋರಾಟ ನಮಗೆಲ್ಲಾ ಸದಾ ಆದರ್ಶವಾಗಬೇಕಿದೆ ಎಂದರು.
ಡಿಎಸ್ಎಸ್ ಮುಖಂಡ ಕೆ.ಬಿ.ರಾಜು ಮಾತನಾಡಿದರು. ಅಂಬೇಡ್ಕರ್ ಅವರ ಜೀವನ ಚರಿತ್ರೆ, ಹೋರಾಟದ ಬಗ್ಗೆ ಮಾಹಿತಿ ಒದಗಿಸಿದರು. ಮುಂದಿನ ಪೀಳಿಗೆಗೆ ಅಂಬೇಡ್ಕರ್ ಅವರ ವಿಚಾರಧಾರೆ, ಚಿಂತನೆಗಳನ್ನು ಬಿತ್ತಬೇಕಿದೆ ಎಂದು ಕರೆ ನೀಡಿದರು.
ಶನಿವಾರಸಂತೆ ಪ್ರೌಢಶಾಲಾ ಶಿಕ್ಷಕ
ಜಯಕುಮಾರ್ ಮುಖ್ಯ ಭಾಷಣ ಮಾಡಿದರು.
ವೇದಿಕೆಯಲ್ಲಿ
ಪುರಸಭೆ ಮುಖ್ಯಾಧಿಕಾರಿ ಗಿರೀಶ್, ವೃತ್ತ ನಿರೀಕ್ಷಕ ಪ್ರದೀಪ್, ಕುಶಾಲನಗರ ಪ್ರೆಸ್ ಕ್ಲಬ್ ಅಧ್ಯಕ್ಷ ರಘು ಕೋಟಿ,
ದಲಿತ ಸಂಘಟನೆಗಳ ಪ್ರಮುಖರಾದ
ದಾಮೋದರ್, ಕೆ.ಬಿ.ರಾಜು, ಹೆಚ್.ಟಿ.ವಸಂತ,ಹೆಚ್.ಪಿ ಶಿವಕುಮಾರ್, ಸಿದ್ದಪ್ಪ, ವಾಲ್ಮೀಕಿ ಸಮಾಜದ ಪ್ರಮುಖರಾದ ಕೆ.ಎನ್.ಅಶೋಕ್, ಗಂಗಾಧರ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಬ್ದುಲ್ ರಜಾಕ್
ವಿವಿಧ ಇಲಾಖೆ
ಅಧಿಕಾರಿಗಳಾದ ವೀರಣ್ಣ, ರಕ್ಷಿತ್, ಶ್ರೀದೇವಿ, ಶ್ರೀನಿವಾಸ್, ವಾರ್ಡನ್ ಮಧು ಮತ್ತಿತರರು ಇದ್ದರು.
ಅಂಗನವಾಡಿ, ಆಶಾ ಕಾರ್ಯಕರ್ತರು, ಕಂದಾಯ, ಪೊಲೀಸ್ ಮತ್ತಿತರರ ಇಲಾಖೆ ಸಿಬ್ಬಂದಿ, ನೌಕರರು ಪಾಲ್ಗೊಂಡಿದ್ದರು.
Back to top button
error: Content is protected !!