ಪ್ರಶಸ್ತಿ

ರಾಜ್ಯಮಟ್ಟದ ಪ್ರಶಸ್ತಿಗೆ ನಿವೃತ್ತ ಅರಣ್ಯ ಅಧಿಕಾರಿ ಆಯ್ಕೆ

ಕುಶಾಲನಗರ, ಏ 27: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಾಯಕಯೋಗಿ-2026 ರಾಜ್ಯಮಟ್ಟದ ಪ್ರಶಸ್ತಿಗೆ ಜಿಲ್ಲೆಯ ಕುಶಾಲನಗರದ ನಿವೃತ್ತ ಅರಣ್ಯ ಅಧಿಕಾರಿ ಹಾಗೂ ಸಮಾಜ ಸೇವಕರಾದ ಮಂಡೆಪಂಡ ಬೋಸ್ ಮೊಣ್ಣಪ್ಪ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದ ಪ್ರತಿ ಜಿಲ್ಲೆ ಯಿಂದ ತಲಾ ಓರ್ವ ಸಾಧಕರನ್ನು ಆಯ್ಕೆ ಮಾಡಲಾಗಿದ್ದು ಕೊಡಗು ಜಿಲ್ಲೆಯಿಂದ ಬೋಸ್ ಮೊಣ್ಣಪ್ಪ ಅವರು ಕಾಯಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಮೇ 1 ರಂದು ಬೆಂಗಳೂರಿನ ಹೊಸಕೋಟೆ ಯಲ್ಲಿ ಪರಿಷತ್ ಆಶ್ರಯದಲ್ಲಿ ನಡೆಯುವ ಕಾಯಕ ಯೋಗಿ- 26 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಪರಿಷತ್ತಿನ ಕೊಡಗು ಜಿಲ್ಲಾ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!