ಕುಶಾಲನಗರ, ಮೇ 04: ಪಂಚರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕೂಡುಮಂಗಳೂರು ಶಕ್ತಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಜೆಪಿ ಪಕ್ಷದ ಕಾರ್ಯಕರ್ತರು ಸೇರಿ ಕೂಡಿಗೆ ಡೇರಿ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭ ಶಕ್ತಿ ಕೇಂದ್ರದ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷ ಧರ್ಮ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮನು ನಂಜುಂಡ, ಇಂದಿರಾ ರಮೇಶ್, ಕೂಡುಮಂಗಳೂರು ಶಕ್ತಿ ಕೇಂದ್ರ ಮಾಜಿ ಅಧ್ಯಕ್ಷ ಮಂಜುನಾಥ, ಕೆ. ವರದ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಗಣೇಶ್, ಓ.ಬಿ.ಸಿ ಮಂಡಲ ಕಾರ್ಯದರ್ಶಿ ರವಿ ಪಕ್ಷಿ, ಸಹಕಾರ ಸಂಘದ ನಿರ್ದೇಶಕ ಎಸ್. ಎಸ್. ಕೃಷ್ಣ, ಕೂಡುಮಂಗಳೂರು, ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಪಕ್ಷದ ಪ್ರಮುಖರಾದ ಕೇಶವ ರೈ, ಎಂ. ಬಿ. ಮಹೇಶ್, ಲೋಕೇಶ್, ಸುಬ್ಬಯ್ಯ, ಯೋಗೇಶ್, ರಾಜು, ಲೋಹಿತ್, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರು ಮಾಡ್ಲಿಗೌಡ, ಮಂಜುನಾಥ, ಮಣಿಕಂಠ, ಪದ್ಮ, ಕನಕ, ಅನಿತಾ ಮತ್ತಿತರರು ಹಾಜರಿದ್ದರು.
Back to top button
error: Content is protected !!