ಚುನಾವಣೆ

ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ: ಕುಶಾಲನಗರದಲ್ಲಿ ಸಂಭ್ರಮಾಚರಣೆ

ಕುಶಾಲನಗರ,‌ ಮೇ 04: ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ,ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿಗಳಿಸಿ ಸ್ಪಷ್ಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ನಗರ ಬಿಜೆಪಿ ಘಟಕದ ಅಧ್ಯಕ್ಷ ಎಂ.ಎಂ.ಚರಣ್ ಹಾಗೂ ಕಾರ್ಯದರ್ಶಿ ಎಚ್.ಎಂ.ಮಧುಸೂದನ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ,ಅಮಿಶ್ ಷಾ ಪರ ಹಾಗೂ ಪಕ್ಷದ ಪರವಾಗಿ ಜಯಘೋಷ ಮೊಳಗಿಸಿದರು.
ಇದೇ ಸಂದರ್ಭ ಎಲ್ಲರಿಗೂ ಸಿಹಿ ವಿತರಣೆ ಮಾಡಿ ಕಾರ್ಯಕರ್ತರು ಸಂಭ್ರಮಿಸಿದರು.
ಈ ಸಂದರ್ಭ ಪಕ್ಷದ ಮುಖಂಡರಾದ ಗೌತಮ್, ಡಿ.ಕೆ.ತಿಮ್ಮಪ್ಪ, ಎಂ.ಡಿ.ಕೃಷ್ಣಪ್ಪ, ಚಂದ್ರಶೇಖರ್ ಹೇರೂರು,ಮನುನಂಜುಂಡ,ಶಿವಶಂಕರ್,ಶಿವರಾಜ್ ,ರಾಮಚಂದ್ರ, ಹೇರೂರು ಚಂದ್ರು,ಭಾಸ್ಕರ್ ನಾಯಕ್, ಇಂದಿರಾ ರಮೇಶ್, ಅನಿಲ್ ಮತ್ತಿತರರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!