ಪ್ರಕಟಣೆ

ಹಾರಂಗಿ ಮತ್ತು ಕಾವೇರಿ ನದಿ ಪಾತ್ರದಲ್ಲಿ ವಾಸಿಸುವ ಜನರ ಗಮನಕ್ಕೆ: ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಮಡಿಕೇರಿ ಮೇ.08:-ಕುಶಾಲನಗರ, ಪಿರಿಯಾಪಟ್ಟಣ, ಅರಕಲಗೂಡು, ಹುಣಸೂರು, ಕೆ.ಆರ್.ನಗರ ಹಾಗೂ ಸಾಲಿಗ್ರಾಮ ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಕೆಗೆ ಮೇ, 09 ರಿಂದ 13 ರವರೆಗೆ ದಿನವೊಂದಕ್ಕೆ ಜಲಾಶಯದಿಂದ ನದಿಗೆ 500 ಕ್ಯೂಸೆಕ್ ನೀರನ್ನು ಹರಿಸಲು ಹಾರಂಗಿ ಜಲಾಶಯ ಕುಡಿಯುವ ನೀರಿನ ಸಮಿತಿ ಸಭೆಯಲ್ಲಿ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಅವರು ಆದೇಶಿಸಿರುತ್ತಾರೆ.
ಹಾಗೆಯೇ ಹಾರಂಗಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಮಂತರ್ ಗೌಡ ಅವರ ಮಾಹಿತಿಗೆ ತರಲಾಗಿರುತ್ತದೆ.
ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕುಶಾಲನಗರ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ಅವರು ಕೋರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!