ಕುಶಾಲನಗರ, ಮೇ. 9: ಕೊಡಗು ಜಿಲ್ಲೆಯ ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘ ನಿಯಮಿತದ ಉದ್ಘಾಟನೆ ಸಮಾರಂಭವು ಮೇ 20 ರಂದು ಕುಶಾಲನಗರದ ಕೆ.ಇ.ಬಿ.ರಸ್ತೆಯಲ್ಲಿರುವ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎನ್.ಅಶೋಕ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ನೂತನ ಕಛೇರಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ.
ನಂತರ ಕಲಾಭವನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಹೆಚ್.ಡಿ. ಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕ ಮಾಧು ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರ ಕ್ಕೆ ಪುಷ್ಪಾ ರ್ಚನೆ ಮಾಡಲಿದ್ದಾರೆ.
ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎನ್.ಅಶೋಕ್ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿ ಉದ್ಘಾಟಿಸಲಿದ್ದಾರೆ. ಸಂಘದ ಪಾಲು ಬಂಡವಾಳ ದೃಢೀಕರಣ ಪತ್ರವನ್ನು ಸಹಕಾರ ಇಲಾಖೆಯ ಮಾಜಿ ಸಚಿವರು, ಹಾಲಿ ಶಾಸಕ ಕೆ.ಎನ್. ರಾಜಣ್ಣ ಬಿಡುಗಡೆ ಮಾಡಲಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ, ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎ. ಎನ್. ಪೂನ್ನಣ್ಣ ಅವರು ಎಸ್. ಎಸ್ ಎಲ್. ಸಿ. ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್. ಸಿ. ಬಸವರಾಜ್,ಕುಶಾಲನಗರ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಂಪನಾಯಕ, ರಾಜ್ಯ ವಾಲ್ಮೀಕಿ ಮಹಾಸಭಾ ಯುವ ಘಟಕ ರಾಜ್ಯಾಧ್ಯಕ್ಷ ಟಿ. ಆರ್. ತುಳಸಿರಾಮ್, ಮೈಸೂರು ವಾಲ್ಮೀಕಿ ಸಹಕಾರ ಸಂಘದ ಅಧ್ಯಕ್ಷ ದೇವರಾಜ್ ಟಿ. ಕಾಟೂರು, ಜಿಲ್ಲಾ ಸ್ಥಾಪಕ ಅಧ್ಯಕ್ಷ ಕೆ.ಎನ್. ಅಶೋಕ್, ಪಿ. ಟಿ ಸುರೇಶ್, ಪಾಲ್ಗೊಳ್ಳಲಿದ್ದಾರೆ. ಹರಿಹರ ಮಠಾಧೀಶರು ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಂಘದ ನಿರ್ದೇಶಕರುಗಳಾದ ಎಂ.ಜಿ.ಕರಿಯಪ್ಪ, ಸಿದ್ದಲಿಂಗಯ್ಯ, ಬಿ.ಎಸ್. ಚಂದನ್ ಕುಮಾರ್, ಕೃಷ್ಣ, ಪರಮೇಶ್, ಪಿ.ಪಿ. ಸುರೇಶ್, ನಾರಾಯಣ ಸ್ವಾಮಿ, ಮುತ್ತ, ಪಿ.ಚೈತ್ರ, ಡಿ. ಸೌಂದರ್ಯ, ಶೋಭ, ಮಮತ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಯಾನ ಹಾಜರಿದ್ದರು.
Back to top button
error: Content is protected !!