ಮನವಿ

ಗಾಯಾಳು ಬಾಲಕಿಗೆ ಪರಿಹಾರ ಒದಗಿಸಲು ಕರವೇ ಮನವಿ

ಕುಶಾಲನಗರ, ಮೇ 12:: ಗುಮ್ಮನಕೊಲ್ಲಿಯಲ್ಲಿ ವಿದ್ಯುತ್ ಅವಘಡದಲ್ಲಿ ಘಾಸಿಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಸಾನ್ವಿ ಗೆ ಅಗತ್ಯ ಪರಿಹಾರ ಕಲ್ಪಿಸಬೇಕಿದೆ ಎಂದು ಆಗ್ರಹಿಸಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಚೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮನೆ‌ ಮಹಡಿಗೆ ಹೊಂದಿಕೊಂಡಂತ್ತಿದ್ದ 11 ಕೆವಿ ವಿದ್ಯುತ್ ಮಾರ್ಗದ ಕಾರಣ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯ ಚಿಕಿತ್ಸೆ ವೆಚ್ಚ, ಭವಿಷ್ಯದ ದೃಷ್ಟಿಯಿಂದ ಅಗತ್ಯ ಪರಿಹಾರ ಒದಗಿಸಬೇಕು. ಅಪಾಯಕಾರಿ ವಿದ್ಯುತ್ ಮಾರ್ಗ ಸ್ಥಳಾಂತರ ಅಥವಾ ಬದಲಾವಣೆ ಹಾಗೂ ಎಲ್ಲೆಡೆ ಅಪಾಯಕಾರಿ ಪರಿಸ್ಥಿತಿಯಲ್ಲಿರುವ ವಿದ್ಯುತ್ ‌ಕಂಬಗಳ ಬದಲಿಗೆ ಶೀಘ್ರದಲ್ಲೇ ಸೂಕ್ತ ಕ್ರಮವಹಿಸಬೇಕು. ತಪ್ಪಿದಲ್ಲಿ ಚೆಸ್ಕಾಂ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಪದಾಧಿಕಾರಿಗಳು ಎಚ್ಚರಿಸಿದರು.
ಈ ಸಂದರ್ಭ ಕರವೇ ಜಿಲ್ಲಾಧ್ಯಕ್ಷ

ದೀಪಕ್ ಕನ್ನಡಿಗ, ತಾಲೂಕು ಅಧ್ಯಕ್ಷ ಸಿ.ಎಂ.ಆಸಿಫ್,ಮಡಿಕೇರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ
ಆನಂದ್,‌ನಗರಾಧ್ಯಕ್ಷ ಯೋಗೇಶ್ ಗೌಡ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!