ಕುಶಾಲನಗರ, ಆ 30: ಕುಶಾಲನಗರ ತಾಲ್ಲೂಕು ಆಡಳಿತ, ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ ಹಾಗೂ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ
ಮಂಗಳವಾರ ಕುಶಾಲನಗರ ತಾಲ್ಲೂಕು ಕಛೇರಿಯಲ್ಲಿ
ಪರಿಸರ ಸ್ನೇಹಿ ಗಣೇಶೋತ್ಸವದ ಅಂಗವಾಗಿ ಜನಜಾಗೃತಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ
ತಾಲ್ಲೂಕು ತಹಶೀಲ್ದಾರ್ ಟಿ.ಎಂ.ಪ್ರಕಾಶ್, ಗೌರಿ ಗಣೇಶ ಹಬ್ಬದ ವೇಳೆಯಲ್ಲಿ ಪ್ರತಿಯೊಬ್ಬರೂ
ಪರಿಸರ ಸ್ನೇಹಿ ಗಣೇಶೋತ್ಸವದಲ್ಲಿ ಪಾಲ್ಗೊಂಡು ಮಾಲಿನ್ಯ ಮುಕ್ತ ಗಣೇಶ ಹಬ್ಬ ಆಚರಣೆ
ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಪಣತೊಡಬೇಕು ಎಂದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಸಮಿತಿ ಉಪಾಧ್ಯಕ್ಷ ಎಂ.ಇ.ಮೊಯಿದ್ದೀನ್, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪಿ.ಕೆ.ಜಗದೀಶ್, ಶಿರಸ್ತೇದಾರ್ ಬಿ.ಪಿ.ಅನಿತಾ, ಸ್ಥಳೀಯರಾದ ಎಚ್.ಎನ್.ಮುರಳೀಧರ್, ಕಂದಾಯ ಇಲಾಖೆಯ ಅಧಿಕಾರಿಗಳು, ನೌಕರರು ಇದ್ದರು.
ಈ ಸಂದರ್ಭದಲ್ಲಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಯನ್ನು ಪ್ರದರ್ಶಿಸಿ ನಾಗರಿಕರು ರಾಸಾಯನಿಕ ಬಣ್ಣ ಮುಕ್ತ ಗಣೇಶ ಮೂರ್ತಿಯನ್ನು ಬಳಕೆ ಮಾಡಬೇಕು ಎಂದು ಮನವಿ ಮಾಡಲಾಯಿತು.
Back to top button
error: Content is protected !!