ಸಭೆ

ಕರ್ನಾಟಕ ರಾಜ್ಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಕೊಡಗು ಜಿಲ್ಲಾ ಘಟಕದ ಸಭೆ

ಕುಶಾಲನಗರ, ಜೂ 26: ಕರ್ನಾಟಕ ರಾಜ್ಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಕೊಡಗು ಜಿಲ್ಲಾ ಘಟಕದ ಸಭೆ ಕುಶಾಲನಗರ ಟಾಪ್ ಇನ್ ಟೌನ್ ಸಭಾಂಗಣದಲ್ಲಿ ನಡೆಯಿತು.

ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ‌ ಸಂಘಟನೆ ಹಾಗೂ ನೂತನ ಸಮಿತಿ ರಚನೆ ಬಗ್ಗೆ ಚರ್ಚಿಸಲಾಯಿತು.

ಸಮುದಾಯದ ಹಿಂದುಳಿದವರು ತಮ್ಮ‌ ಹಕ್ಕನ್ನು ಪ್ರತಿಪಾದಿಸಲು, ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತರಾಗುವಂತೆ ಸಭೆಯಲ್ಲಿ ಚರ್ಚೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ‌ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ಅವರು, ಜಿಲ್ಲೆಯಲ್ಲಿ ಹಿಂದುಳಿದ ಒಕ್ಕಲಿಗ‌‌ ಸಮುದಾಯದ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ಎಲ್ಲರೂ ಮನಗಾಣಬೇಕಿದೆ. ಹಿಂದುಳಿದವರ ಸಮಸ್ಯೆಗಳನ್ನು ಆಲಿಸುವವರು ಇಲ್ಲದಂತಾಗಿದೆ‌. ಅರ್ಹ ಫಲಾನುಭವಿಗಳು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸೂಕ್ತ ನಾಯಕತ್ವದ ಮೂಲಕ ಸಮಸ್ಯೆ ನಿವಾರಣೆಗೆ ಸದಸ್ಯರನ್ನು ಸಂಘಟಿಸುವ ಅವಶ್ಯಕತೆಯಿದೆ. ಸಂಘಟನೆ ಸದೃಢವಾದಾಗ ಮಾತ್ರ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ.
ಈ‌ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸೂಕ್ತ ಪದಾಧಿಕಾರಿಗಳನ್ನು ನಿಯೋಜಿಸಿ ಸಮುದಾಯದವರನ್ನು ಒಗ್ಗೂಡಿಸುವ ಯೋಜನೆ ಹೊಂದಲಾಗಿದೆ ಎಂದು ತಿಳಿಸಿದರು.
ಅತಿಥಿಗಳಾಗಿ ಪಾಲ್ಗೊಂಡಿದ್ದ
ಸಂಘದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಕುಮಾರಿ ಸಂಘಟನೆ ಬಗ್ಗೆ ಮಾರ್ಗದರ್ಶನ ನೀಡಿದರು. 2019 ರಲ್ಲಿ ಸಂಘ ಅಸ್ತಿತ್ವಕ್ಕೆ ತರಲಾಯಿತು. ಹಿಂದುಳಿದವರಿಗೆಂದೇ ಸರಕಾರ ನೂರಾರು ಕೋಟಿ ಅನುದಾನ ಒದಗಿಸುತ್ತಿದ್ದರೂ ಅದು ಅರ್ಹರಿಗೆ ತಲುಪುತ್ತಿದೆಯೇ ಎನ್ನುವುದು ಅನುಮಾನ ಕಾಡುತ್ತಿದೆ. ನಮ್ಮ ವ್ಯಾಪ್ತಿಯಲ್ಲಿ ನಮ್ಮ ಸಮುದಾಯಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಪಡೆದುಕೊಳ್ಳಲು ನಾವು ಮಾಹಿತಿ ಹೊಂದುವ ಅಗತ್ಯವಿದೆ. ಜ್ಞಾನವಂತರಾದಾಗ ಮಾತ್ರ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ಯಾವುದೇ ಅಡ್ಡಿಯಿಲ್ಲದೆ ಪಡೆದುಕೊಳ್ಳಬಹುದು. ಇದಕ್ಕಾಗಿ ನಾವು ಪರಸ್ಪರ ಹೊಂದಾಣಿಕೆಯಿಂದ ಒಗ್ಗೂಡಿ ಕಾರ್ಯನಿರ್ವಹಿಸಬೇಕಿದೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಸುಧಾಮಣಿ, ಸಂಘಟನಾ ಕಾರ್ಯದರ್ಶಿ ಜಿತೇಂದ್ರ, ಮೈಸೂರು ಜಿಲ್ಲಾಧ್ಯಕ್ಷ ಪುಟ್ಟೇಗೌಡ ಮಾತನಾಡಿ, ಯಾವುದೇ ರಾಜಕೀಯ ಮುಖಂಡರ ಹೊರತಾಗಿ ನಮ್ಮ ಸಂಘದ ಮೂಲಕವೇ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಲಭಿಸುವಂತಾಗಬೇಕಿದೆ. ಯಾವುದೇ ರಾಜಕೀಯ ಶಿಫಾರಸು ಇಲ್ಲದೆ ನೇರವಾಗಿ ಅರ್ಹರಿಗೆ ಅನುದಾನ, ಯೋಜನೆಗಳ ಪ್ರಯೋಜನ ಲಭಿಸಬೇಕೆನ್ನುವುದು ಸಂಘಟನೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಸಭೆಯಲ್ಲಿ
ಕುಶಾಲನಗರ ತಾಲೂಕಿನ ಪ್ರಮುಖ ಪ್ರದೀಪ್, ಸೋಮವಾರಪೇಟೆ ತಾಲೂಕಿನ ಪ್ರಮುಖ ಹೂವಯ್ಯ, ವಿರಾಜಪೇಟೆ ತಾಲೂಕಿನ ಪ್ರಮುಖ ಡಾಲು, ತಿತಿಮತಿಯ ಮಂಜುನಾಥ್, ನೀರಾವರಿ ಸಲಹಾ ಸಮಿತಿ ಸದಸ್ಯ ಐಗೂರಿನ
ಎ.ಪಿ.ಸುಬ್ಬಯ್ಯ, ಪತ್ರಕರ್ತೆ ಉಷಾ ಪ್ರೀತಂ, ಮೂರ್ನಾಡು ನಟೇಶ್ ವೇದಿಕೆಯಲ್ಲಿದ್ದರು.

ಸಂದೀಪ್ ಕಾರ್ಯಕ್ರಮ ನಿರೂಪಿಸಿದರು.
ಸಭೆಯಲ್ಲಿ ಕೊಡಗು ಜಿಲ್ಲೆಯ ವಿವಿಧೆಡೆಯಿಂದ ಸದಸ್ಯರು
ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!