ಕುಶಾಲನಗರ, ಆ 31: ಕರ್ನಾಟಕದಲ್ಲಿ ಪ್ರಪ್ರಥಮ ಡೈರಿಯಾಗಿ ಸ್ಥಾಪನೆಗೊಂಡ ಕೂಡಿಗೆ ಡೈರಿಯನ್ನು ಅಭಿವೃದ್ಧಿ ಪಡಿಸುವುದು, ಜಿಲ್ಲೆಯ ಹಾಲಿನ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು ಹಾಲಿನ ಉತ್ಪನ್ನಗಳನ್ನು ಸಕಾಲದಲ್ಲಿ ಒದಗಿಸುವುದರ ಜೊತೆಗೆ ಮದರ್ ಡೈರಿಯನ್ನು ವಿವಿಧ ಹಂತದಲ್ಲಿ ಅಭಿವೃದ್ಧಿ ಪಡಿಸುವುದಾಗಿ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದರು.
ಹಾಸನದಲ್ಲಿ ಹಾಸನ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿರುವ ಕೂಡಿಗೆ ಡೈರಿಯ ಅಭಿವೃದ್ಧಿ ಪೂರಕವಾದ ಯೋಜನೆಗೆ ಕ್ರಿಯಾ ಯೋಜನೆ ಸಿದ್ದವಾಗಿದ್ದು ಅದರನ್ವಯ ಹಂತ ಹಂತವಾಗಿ ಒಕ್ಕೂಟದ ಮೂಲಕ ಹಣ ಬಿಡುಗಡೆ ಮಾಡಿ ಜಿಲ್ಲಾ ಹಾಲಿನ ಗ್ರಾಹಕರಿಗೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದ್ದು ಈಗಿನ ಹಳೆ ಕಟ್ಟಡವನ್ನು ತೆರವುಗೊಳಿಸಿ ನೂತನ ಮಾದರಿಯಲ್ಲಿ ಹೊಸ ತಂತ್ರಜ್ಞಾನದ ಯಂತ್ರೋಪಕರಣಗಳನ್ನು ಅಳವಡಿಸಲಾಗುವುದು. ಹಾಲಿನ ಉತ್ಪನ್ನಗಳು ತಯಾರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗು ಜಿಲ್ಲೆಯ ಎಲ್ಲಾ ಹೋಬಳಿ ಮತ್ತು ತಾಲ್ಲೂಕು ಮಟ್ಟದಲ್ಲಿ ಅನೇಕ ನಂದಿನಿ ಹಾಲಿನ ಮಳಿಗೆಗಳನ್ನು ತೆರೆದು ಅದರ ಮೂಲಕ ಗ್ರಾಹಕರಿಗೆ ಸಮರ್ಪಕವಾಗಿ ನಿಗದಿತ ಸಮಯದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ದೊರಕಿಸುವ ಮತ್ತು ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಹಾಕುವ ರೈತರಿಗೆ ಗೌರಿ ಗಣೇಶ ಹಬ್ಬದ ಅಂಗವಾಗಿ ಲೀಟರ್ ಒಂದಕ್ಕೆ ಒಂದು ರೂಪಾಯಿ ಹೆಚ್ಚಳ ಮಾಡಲಾಗಿದ್ದು ರಾಜ್ಯದಲ್ಲಿ ಪ್ರಥಮ ಸ್ಧಾನ ದಲ್ಲಿದೇವೆ , ರಾಜ್ಯದ ಇತರೆ ಒಕ್ಕೂಟಗಳು ಹಾಲು ಉತ್ಪಾದಕರಿಗೆ ನೀಡುವ ಹಣಕ್ಕಿಂತ ಹೆಚ್ಚು ಹಣವನ್ನು ಹಾಲು ಉತ್ಪಾದಕ ರೈತರಿಗೆ ನೀಡಲಾಗುತ್ತಿದೆ ಎಂದು ಸುದ್ಧಿಗಾರರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ. ಕೆ ಹೇಮಂತ್ ಕುಮಾರ್ ಸೇರಿದಂತೆ ಇತರೆ ನಿರ್ದೇಶಕರು ಹಾಜರಿದ್ದರು.
Back to top button
error: Content is protected !!