ಕಾರ್ಯಕ್ರಮ

ಉಚಿತ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಕುಶಾಲನಗರ, ಮೇ 23: ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ವಿಠಲ ಸಾಲಿಯಾನ್ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ಉಚಿತ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಲ ಕಾಲಕ್ಕೆ ಅಗತ್ಯವಿರುವ ತಂತ್ರಜ್ಞಾನಗಳಲ್ಲಿ ನುರಿತು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆ ನೀಡುವಲ್ಲಿ ನಿಪುಣರಾಗಬೇಕಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಗಳ ಮೂಲಕ ಮಹಿಳೆಯರಿಗೆ ಹಲವು ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಅದರ ಸದುಪಯೋಗವನ್ನು ಪಡೆಯುವಂತೆ ಅವರ ಕೋರಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಶುಭ ಕೋರಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ವನಿತಾ ಚಂದ್ರಮೋಹನ್ ಮಾತನಾಡಿ, ಮಹಿಳೆಯರು ಸಮಯ ವ್ಯರ್ಥ ಮಾಡದೆ ತಾವು ಕಲಿತಿರುವ ವಿದ್ಯೆಯನ್ನು ಬಳಸಿಕೊಂಡು ಕುಟುಂಬ ನಿರ್ವಹಣೆಯಲ್ಲಿ ಕೈಜೋಡಿಸುವಂತಾಗಬೇಕು ಎಂದು ಹೇಳಿದರು. ಉಚಿತ ತರಬೇತಿಗೆ ಸೀಮಿತರಾಗದೆ ಹೆಚ್ಚುವರಿ ತರಬೇತಿ ಪಡೆಯುವ ಮೂಲಕ ಮುಂದುವರಿದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.
ಶಿಬಿರಾರ್ಥಿಗಳಿಗೆ ಒಂದು ತಿಂಗಳ ಕಾಲ ತರಬೇತು ನೀಡಿದ ಸೌಂದರ್ಯ ತಜ್ಞರಾದ ಸಿಂಚನ ಪ್ರೀತಂ ಶೆಟ್ಟಿ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.
ಶಿಬಿರದಲ್ಲಿ ತರಬೇತಿ ಪಡೆದ ಮಹಿಳೆಯರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಹಂಚಿಕೊಂಡರು.
ಈ ಸಂದರ್ಭ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಯರಾದ ಎಂ ಎನ್ ಚಂದ್ರಮೋಹನ್ ಮಾತನಾಡಿದರು.
ಮಹಿಳಾ ಜ್ಞಾನವಿಕಾಸ ಸಮನ್ವಯಾಧಿಕಾರಿ ಸರಿತಾ ಮತ್ತು ಸೇವಾ ಪ್ರತಿನಿಧಿ ಮಂಜುಳಾ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!