ಪ್ರಕಟಣೆ

ಮದ್ಯ ಮಾರಾಟ ನಿಷೇಧ

ಮಡಿಕೇರಿ ಮೇ.25:-ಕೊಡಗು ಜಿಲ್ಲೆಯ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ಮೇ, 27 ಮತ್ತು 28 ರಂದು ನಡೆಯುವ ಬೇಡು ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮೇ, 28 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವರಪುರ ಗ್ರಾಮದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!