ಕುಶಾಲನಗರ, ಜೂ 03: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್
ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ನಗರ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ಕಾರ್ಯಕರ್ತರು ಡಿಕೆಶಿ ಪರ ಜಯಕಾರ ಮೊಳಗಿಸಿದರು. ಪಟಾಕಿ ಸಿಡಿಸಿ ನೆರದಿದ್ದವರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪಕ್ಷ ನಿಷ್ಠೆಗೆ ಪ್ರತೀಕವಾಗಿರುವ ಡಿ.ಕೆ.ಶಿವಕುಮಾರ್ ಅವರ ಶ್ರಮಕ್ಕೆ ಮುಖ್ಯಮಂತ್ರಿ ಸ್ಥಾನ ಒಲಿದು ಬಂದಿದೆ. ಅವರ ಆಡಳಿತಾವಧಿಯಲ್ಲಿ ರಾಜ್ಯ ಮತ್ತಷ್ಟು ಸುಭೀಕ್ಷೆ ಹೊಂದಲಿ ಎಂದರು.
ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರ ಅವಧಿಯಲ್ಲಿ ಪಕ್ಷ ಮತ್ತಷ್ಟು ಬಲಿಷ್ಠಗೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆಲುವಿನ ನಾಗಾಲೋಟ ಮುಂದುವರೆಸಲಿದೆ. ಅವರ ಸಂಪುಟದಲ್ಲಿ ಶಾಸಕ ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ಲಭಿಸುವಂತಾಗಲಿ ಎಂದು ಆಗ್ರಹಿಸಿದರು.
ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆ ಮೂಲಕ ಡಿ.ಕೆ. ಶಿವಕುಮಾರ್ ಅವರು ಇಂದು ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಮುಂದಿನ ಅವಧಿ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲಿ ಎಂದು ಕೋರಿದರು. ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಲಭಿಸಲಿ ಎಂದರು.
ಈ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ಶಿವಶಂಕರ್, ಎಂ.ಎಂ.ಪ್ರಕಾಶ್, ವಿ.ಜೆ.ನವೀನ್, ಜಿ.ಬಿ
ಜಗದೀಶ್, ವಿ.ಎಸ್.ಆನಂದಕುಮಾರ್, ಶೇಖ್ ಖಲೀಮುಲ್ಲಾ, ರಂಜನ್, ಪದ್ಮಾ, ಅನಿಲ್, ಆನಂದ್, ಗಯಾಜ್,ಮಹದೇವ, ಚಂದ್ರು ಮತ್ತಿತರರು ಇದ್ದರು.
Back to top button
error: Content is protected !!