ಕುಶಾಲನಗರ, ಜೂ 16: ಗೊಂದಿಬಸವನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.
ಕುಶಾಲನಗರ ಪುರಸಭೆ ಮಾಜಿ ಸದಸ್ಯ ಜಿ.ಬಿ.ಜಗದೀಶ್ ಅವರು ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು, ಸರಕಾರಿ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ದಾನಿಗಳ ಸಹಕಾರ ಅತ್ಯಗತ್ಯ. ಕ್ಷೇತ್ರದ ಶಾಸಕರು ಮೂರು ವರ್ಷಗಳಲ್ಲಿ ಅತ್ಯುತ್ತಮವಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಗೊಂದಿಬಸವನಹಳ್ಳಿ ಗ್ರಾಮದ ಅಭಿವೃದ್ಧಿಗೆ ರೂ 5 ಕೋಟಿ ಅನುದಾನ ಕೂಡ ನೀಡಿರುವ ಹಿನ್ನೆಲೆಯಲ್ಲಿ ಅವರ ಅನುಪಸ್ಥಿತಿಯಲ್ಲಿ ಅವರ ಪರವಾಗಿ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕಿ ಜಲಜಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಬಿ.ಜಗದೀಶ್ ಅವರ ಸದಸ್ಯತ್ವ ಅವಧಿಯಲ್ಲಿ ಗ್ರಾಮದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಜೊತೆಗೆ ಶಾಲೆಯ ಅಭಿವೃದ್ಧಿ ಸೇರಿದಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಾ ಬರುತ್ತಿರುವುದು ಶ್ಲಾಘನೀಯ ವಿಚಾರ ಎಂದರು.
ಈ ಸಂದರ್ಭ
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಹೇಶ್ ಉಪಾಧ್ಯಕ್ಷೆ ರೂಪಾ, ಸದಸ್ಯೆ ಮಣಿ, ರಾಜೇಶ್ವರಿ, ಶಕೀನ, ನೇತ್ರಾವತಿ, ಆಶಾ, ಚಂದ್ರಾವತಿ, ಈಶ್ವರಿ, ಜಯಂತಿ, ಗುತ್ತಿಗೆದಾರ ಕೃಷ್ಣಪ್ಪ, ಪೋಷಕರಾದ ಅರಸು ರಾಜು ಸೇರಿದಂತೆ ಶಿಕ್ಷಕ ವೃಂದದವರು ಇದ್ದರು.
Back to top button
error: Content is protected !!