ಪ್ರಕಟಣೆ

ವಿದ್ಯುತ್ ಕ್ಷೇತ್ರ ಖಾಸಾಗೀಕರಣ ವಿರೋಧಿಸಿ ರಾಜ್ಯವ್ಯಾಪ್ತಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು‌ ಮನವಿ

ಕುಶಾಲನಗರ, ಜೂ 20: ಕರ್ನಾಟಕ ವಿದ್ಯುತ್ ಕ್ಷೇತ್ರದ ಖಾಸಾಗೀಕರಣ ವಿರೋಧಿಸಿ ಜೂ 22 ರ ಸೋಮವಾರ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ರಾಜ್ಯಾಧ್ಯಕ್ಷ ಸಿ.ರಮೇಶ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಸಾರ್ವಜನಿಕರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ವಸಂತ್ ರೈ ಮನವಿ ಮಾಡಿದ್ದಾರೆ.“ವಿದ್ಯುತ್ ಕ್ಷೇತ್ರದ ಖಾಸಗೀಕರಣದಿಂದ ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ. ಗ್ರಾಮೀಣ ಪ್ರದೇಶಗಳ ಸೇವೆ, ಉದ್ಯೋಗ ಭದ್ರತೆ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.

ಖಾಸಾಗೀಕರಣದಿಂದ ವಿದ್ಯುತ್ ದರ ಹೆಚ್ಚಾಗುವ ಸಾಧ್ಯತೆಯಿದೆ. ಖಾಸಗಿ ಕಂಪನಿಗಳು ಲಾಭದ ಉದ್ದೇಶದಿಂದ ಕಾರ್ಯನಿರ್ವಹಿಸುವುದರಿಂದ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇರುತ್ತದೆ.

ಹೆಚ್ಚು ಲಾಭವಿಲ್ಲದ ಪ್ರದೇಶಗಳಿಗೆ ಸಮರ್ಪಕ ಸೇವೆ ದೊರೆಯದೇ ಇರಬಹುದು , ಸರ್ಕಾರಿ ನೌಕರರ ಹುದ್ದೆಗಳು ಕಡಿಮೆಯಾಗುವ ಅಥವಾ ಗುತ್ತಿಗೆ ಆಧಾರಿತ ಉದ್ಯೋಗಗಳು ಹೆಚ್ಚಾಗುವ ಸಾಧ್ಯತೆ ಇದೆ, ಜನಸಾಮಾನ್ಯರ ಹಿತಕ್ಕಿಂತ ಕಂಪನಿಗಳ ಲಾಭಕ್ಕೆ ಹೆಚ್ಚಿನ ಆದ್ಯತೆ ಸಿಗುವ ಸಾಧ್ಯತೆ ಇರುತ್ತದೆ, ಸೇವೆಗಳ ವೆಚ್ಚ ಹೆಚ್ಚಾಗುವ ಸಾಧ್ಯತೆ – ಮೀಟರ್, ಸಂಪರ್ಕ, ನಿರ್ವಹಣೆ ಮುಂತಾದ ಸೇವೆಗಳ ಶುಲ್ಕ ಹೆಚ್ಚಾಗಲಿದೆ ಎಂದು ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!