ಕುಶಾಲನಗರ, ಜು 01:ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ರಮವಾಗಿ ಜೂಜಾಟವಾಡುತ್ತಿದ್ದ 28 ಜನರನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಗದಾಳು ಗ್ರಾಮದಲ್ಲಿ ಸರ್ಕಾರದ ಪರವಾನಗಿಯಿಲ್ಲದೆ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಜೂಜಾಟ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಮಡಿಕೇರಿ ಉಪವಿಭಾಗ ಮಟ್ಟದ ಅಪರಾಧ ಪತ್ತೆ ವಿಶೇಷ ತಂಡದ ಅಧಿಕಾರಿ /ಸಿಬ್ಬಂದಿಗಳು ದಿನಾಂಕ: 01-07-2026 ರಂದು ಬೆಳಗಿನ ಜಾವ ದಾಳಿ ನಡೆಸಿ ಮಂಡ್ಯ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಮೂಲದ 28 ಜನ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ: 111/2026, ಕಲಂ: 80 ಕೆ.ಪಿ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ತನಿಖಾ ತಂಡದ ವಿವರ:
1. ಸೂರಜ್,ಪಿ.ಎ. ಡಿಎಸ್ಪಿ, ಮಡಿಕೇರಿ ಉಪವಿಭಾಗ,
2. ಚಂದ್ರಶೇಖರ್.ಹೆಚ್.ವಿ. ಪಿಐ, ಮಡಿಕೇರಿ ಗ್ರಾಮಾಂತರ ಪ್ರೊ.ಠಾ.
3. ಮಡಿಕೇರಿ ಉಪವಿಭಾಗದ ಅಪರಾಧ ತನಿಖೆ/ಪತ್ತೆ ಅಧಿಕಾರಿ/ಸಿಬ್ಬಂದಿಗಳು.
ವಶಪಡಿಸಿಕೊಂಡ ಸ್ವತ್ತುಗಳ ವಿವರ;
ನಗದು ರೂ. 11,08,130, 05 ಕಾರುಗಳು, 01 ದ್ವಿಚಕ್ರ ವಾಹನ, 35 ಮೊಬೈಲ್ಗಳು.
Back to top button
error: Content is protected !!