ಪ್ರಕಟಣೆ

ಹಿಂದಿ ಹೇರಿಕೆ ವಿರುದ್ದ ಹೋರಾಟಕ್ಕೆ ಜಯ: ಸರಕಾರದ ಕ್ರಮ ಸ್ವಾಗತಿಸಿದ ಕರವೇ ಡಾ.ಬಿ.ಎ.ದಿನೇಶ್ ಶೆಟ್ಟಿ

ಕುಶಾಲನಗರ, ಮಾ 28:ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೇಲಿನ ಹಿಂದಿ‌ ಭಾಷೆ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿರುವುದನ್ನು ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ ಸ್ವಾಗತಿಸಿದ್ದು‌ ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಸಂದ ಜಯ ಎಂದು‌ ಸಂಭ್ರಮಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ‘ತೃತೀಯ ಭಾಷೆ’ಯನ್ನು ಗ್ರೇಡಿಂಗ್ ವ್ಯವಸ್ಥೆಗೆ ಒಳಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿರುವುದು ಕನ್ನಡಿಗರಿಗೆ ಆಶಾದಾಯಕ ವಿಚಾರವಾಗಿದೆ
ಹಿಂದಿ ಪರೀಕ್ಷೆ ವಿರೋಧಿಸಿ ಹೆಚ್. ಶಿವರಾಮೇಗೌಡರು, ಸಾ.ರಾ.ಗೋವಿಂದ್ ಸೇರಿದಂತೆ ಕನ್ನಡಪರ ಹೋರಾಟಗಾರರು ನಡೆಸಿದ ಹೋರಾಟಕ್ಕೆ ಜಯ ದೊರೆತಿದೆ.

ರಾಜ್ಯ ಸರ್ಕಾರ ಮೂರನೇ ಭಾಷೆ ಹಿಂದಿಗೆ ಗ್ರೇಡ್‌ ನೀಡುವ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಶಿಕ್ಷಣ ಸಚಿವರ ಪ್ರತಿಕ್ರಿಯೆಯಿಂದ ಕನ್ನಡದ ಮಕ್ಕಳ ಮೇಲಿನ ಹೆಚ್ಚಿನ ಹೊರೆ ತಗ್ಗಿದಂತಾಗಿದೆ. ಎಷ್ಟೋ ವಿದ್ಯಾರ್ಥಿಗಳು ಕೇವಲ ಹಿಂದಿಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಎಸ್‌ ಎಸ್‌ ಎಲ್‌ ಸಿ ಮುಗಿಸಲು ಪರದಾಡುವಂತಹ ಸ್ಥಿತಿ ಇತ್ತು. ಇದೀಗ ರಾಜ್ಯ ಸರ್ಕಾರ ಕೈಗೊಂಡ ಕ್ರಮದಿಂದ ಮಕ್ಕಳ ಮೇಲಿನ ಹೊರೆ ಇಳಿದಂತಾಗಿದೆ ಎಂದು ಡಾ ಬಿ.ಎ.ದಿನೇಶ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!