ಕುಶಾಲನಗರ, ಡಿ 09: ಸಮಾಜದಲ್ಲಿ ಸರಿ ತಪ್ಪುಗಳ ಬಗ್ಗೆ ಬೆಳಕು ಚೆಲ್ಲುವ ಪತ್ರಕರ್ತರ ಸ್ಥೈರ್ಯ ಕುಗ್ಗಿಸುವ ಕೆಲಸಕ್ಕೆ ಸರಕಾರಿ ಅಧಿಕಾರಿಗಳು ಮುಂದಾಗಬಾರದು ಎಂದು ಡಿಎಸ್ಎಸ್ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಸಙಚಾಲಕ ಕೆ.ಬಿ.ರಾಜು ಹೇಳಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ಪುರಸಭೆಯಲ್ಲಿ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮೀನುಗಾರಿಕೆ ಇಲಾಖೆ ಅಧಿಕಾರಿ ಮೊಬೈಲ್ ನಲ್ಲಿ ಮಗ್ನರಾಗಿದ್ದರು ಎಂದು ಕುಶಾಲನಗರದ ಪತ್ರಕರ್ತರು ವರದಿ ಮಾಡಿದ್ದರು. ಪತ್ರಕರ್ತರ ಈ ಕೆಲಸ ತಪ್ಪು ಎನ್ನುವಂತೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಆರೋಪಿಸಿರುವುದು ಸಮಂಜಸವಲ್ಲ. ಪತ್ರಕರ್ತರ ಕೆಲಸದ ಬಗ್ಗೆ ಆರೋಪ ವ್ಯಕ್ತಪಡಿಸುವುದು, ದೂರು ಸಲ್ಲಿಸುವ ಮೂಲಕ ಅವರನ್ನು ಕುಗ್ಗಿಸುವ ಕೆಲಸಕ್ಕೆ ಕೈಹಾಕಬಾರದು. ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಚರ್ಚಿಸುವ ಸಭೆಯಲ್ಲಿ ಮೊಬೈಲ್ ನಲ್ಲಿ ಮಗ್ನರಾಗುವುದು ಸರಿಯಾದ ಕ್ರಮವಲ್ಲ. ಕಛೇರಿಯ ತುರ್ತು ಕೆಲಸಗಳಿದ್ದಲ್ಲಿ ಇಲಾಖೆಯ ಸಹ ಸಿಬ್ಬಂದಿಗಳನ್ನು ಸಭೆಗೆ ಕಳುಹಿಸಬೇಕಿತ್ತು ಎಂದು ಅವರು ತಿಳಿಸಿದರು. ಈ ಘಟನೆ ಕುರಿತು ಸಮಿತಿ ವತಿಯಿಂದ ಖಂಡಿಸಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ಜಿಲ್ಲಾ ಸಂಚಾಲಕ ರಮೇಶ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಎಸ್.ಕೆ.ಸ್ವಾಮಿ, ಟಿ.ಜಿ.ಶಿವಪ್ಪ, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಕೆ.ಆರ್.ಪ್ರೇಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಟಿ. ಸುರೇಶ್ ಕುಮಾರ್, ಕುಶಾಲನಗರ ತಾಲ್ಲೂಕು ಉಪಾಧ್ಯಕ್ಷ ಚಂದ್ರು ಹಾಜರಿದ್ದರು.
Back to top button
error: Content is protected !!