ಕುಶಾಲನಗರ, ಆ 04: ಕೊಡಗು ಜಿಲ್ಲೆಗೆ ಆಗಮಿಸಿದ ಉಸ್ತುವಾರಿ ಸಚಿವ ಪಿ.ಎಂ ನರೇಂದ್ರಸ್ವಾಮಿ ಅವರನ್ನು ಕೊಡಗು-ಮೈಸೂರು ಗಡಿಯಲ್ಲಿ ಆದರದಿಂದ ಬರಮಾಡಿಕೊಳ್ಳಲಾಯಿತು. ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು ಸಚಿವರನ್ನು ಬರಮಾಡಿಕೊಂಡರು.
ಕೊಡಗು ಜಿಲ್ಲೆಯ ಎಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಟಿ / ಬರ ಪರಿಸ್ಥಿತಿಯ ಕುರಿತು ಸಚಿವರು ಜಿಪಂ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಮಡಿಕೇರಿ ತಾಲ್ಲೂಕು ಕೆ.ನಿಡುಗಣಿ ಗ್ರಾಮದಲ್ಲಿರುವ ಸರ್ಕಾರಿ ಗೋಶಾಲೆ ವೀಕ್ಷಣೆ, ಕುಶಾಲನಗರ ತಾಲ್ಲೂಕು ಹಾರಂಗಿ ಜಲಾಶಯಕ್ಕೆ ಭೇಟಿ ಮತ್ತು ವೀಕ್ಷಣೆ ಹಾಗೂ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
Back to top button
error: Content is protected !!