ಕುಶಾಲನಗರ, ಆ 06: ಇಲ್ಲಿಗೆ ಸಮೀಪದ ಹಾರಂಗಿ ಬಳಿಯ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ ಒಂಭತ್ತನೆ ತರಗತಿ ವಿದ್ಯಾರ್ಥಿ ಉನ್ನತ್ ಸಾರಥ್ಯ ಚೆಸ್ ನಲ್ಲಿ ಸಾಧನೆಗೈವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾನೆ.
ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ 17 ರ ವಯೋಮಾನದ ಒಳಗಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಟಿ.ಕೆ.ಸುಧೀರ್ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ ಶ್ಲಾಘಿಸಿದ್ದಾರೆ.
Back to top button
error: Content is protected !!