ಪ್ರಕಟಣೆ

ಬೃಹತ್ ಪಂಚಿನ ಮೆರವಣಿಗೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಆದೇಶ

ಮಡಿಕೇರಿ ಆ.07:-ಕೊಡಗು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಆಗಸ್ಟ್, 07 ರಿಂದ ಆಗಸ್ಟ್, 14 ರವರೆಗೆ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಚಿನ ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಆಗಸ್ಟ್, 07 ರಂದು ಮಧ್ಯಾಹ್ನ 2 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಡಿಕೇರಿ ನಗರದ 01 ಕಿ.ಮೀ.ವ್ಯಾಪ್ತಿಯಲ್ಲಿ, ಆಗಸ್ಟ್, 08 ರಂದು ಮಧ್ಯಾಹ್ನ 2 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಐಗೂರು ಗ್ರಾಮ ಪಂಚಾಯಿತಿ ಸುತ್ತಮುತ್ತಲಿನ 01 ಕಿ.ಮೀ.ವ್ಯಾಪ್ತಿಯಲ್ಲಿ, ಆಗಸ್ಟ್, 09 ರಂದು ಮಧ್ಯಾಹ್ನ 2 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಶನಿವಾರಸಂತೆ ಠಾಣಾ ವ್ಯಾಪ್ತಿಯ ಕೊಡ್ಲಿಪೇಟೆ ಪಟ್ಟಣದ ಸುತ್ತಮುತ್ತಲಿನ 01 ಕಿ.ಮೀ. ವ್ಯಾಪ್ತಿಯಲ್ಲಿ, ಆಗಸ್ಟ್, 12 ರಂದು ಮಧ್ಯಾಹ್ನ 2 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವಿರಾಜಪೇಟೆ ನಗರ ಠಾಣಾ ವ್ಯಾಪ್ತಿಯ ಸುತ್ತಮುತ್ತಲಿನ 01 ಕಿ.ಮೀ. ವ್ಯಾಪ್ತಿಯಲ್ಲಿ ಹಾಗೂ ಆಗಸ್ಟ್, 14 ರಂದು ಮಧ್ಯಾಹ್ನ 2 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕುಶಾಲನಗರ ಪಟ್ಟಣ ಮತ್ತು ಅದರ ಸುತ್ತಮುತ್ತ 01 ಕಿ.ಮೀ.ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!