ಕ್ರೈಂ

ಗಾಂಜಾ ಮಾರಾಟ: ಮೂವರ ಬಂಧನ

ಕುಶಾಲನಗರ, ಆ 21: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ /ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಿವಳವಾಡಿ ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಿನಾಂಕ: 21-08-2026 ರಂದು ದಾಳಿ ನಡೆಸಿ 03 ಜನ ಆರೋಪಿಗಳನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.

ಸದರಿ ಆರೋಪಿಗಳ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊ.ಸಂ: 66/2026, ಕಲಂ: 20(b)(ii)(A) NDPS Act ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.

ಆರೋಪಿಗಳ ವಿವರ;

1. ಅಭಿಲಾಷ್ @ ಅಭಿ.ಕೆ.ಜೆ, 29 ವರ್ಷ, ಉಡತ್‌ ಮೊಟ್ಟೆ, ಎರವನಾಡು ಗ್ರಾಮ, ಮಡಿಕೇರಿ ತಾ॥

2. ಆಕಾಶ್.ಪಿ.ವಿ, 20 ವರ್ಷ, ಮಕ್ಕಂದೂರು, ಮಡಿಕೇರಿ ತಾ॥

3. ಮಿಲನ್.ಎ.ಸಿ, 21 ವರ್ಷ, ಹಾಲೇರಿ, ಸೋಮವಾರಪೇಟೆ ತಾ.

ವಶಪಡಿಸಿಕೊಂಡ ಸ್ವತ್ತುಗಳ ವಿವರ;
2 ಕೆಜಿ 136 ಗ್ರಾಪಂ ಗಾಂಜಾ, ಕೃತ್ಯಕ್ಕೆ ಬಳಸಿದ ಒಂದು ಪಿಕ್ ಜೀಪ್.

Related Articles

Leave a Reply

Your email address will not be published. Required fields are marked *

Back to top button
error: Content is protected !!