ಕುಶಾಲನಗರ, ಆ.22 :
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ( ಆ.22 ರಂದು ) ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಹಾಗೂ ಕಬ್, ಬುಲ್ ಬುಲ್ ಮಕ್ಕಳಿಗೆ ದೇಶಭಕ್ತಿ ಗೀತೆಗಳ ತಾಲ್ಲೂಕು ಮಟ್ಟದ ಗೀತ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಕುಶಾಲನಗರ ತಾಲ್ಲೂಕಿನ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವತಿಯಿಂದ ಆಗಮಿಸಿದ್ದ ಮಕ್ಕಳ ಗುಂಪು ಗಾಯನ ಸ್ಪರ್ಧೆಯು ಪ್ರೇಕ್ಷಕರ ಗಮನ ಸೆಳೆಯಿತು.
ಮಕ್ಕಳು ವಿವಿಧ ದೇಶಭಕ್ತಿಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು. ಇದು ಮಕ್ಕಳಲ್ಲಿರುವ ವಿಭಿನ್ನ ಗಾಯನ ಶೈಲಿಯನ್ನು ಗುರುತಿಸುವ ವೇದಿಕೆಯಾಯಿತು.
ಮಕ್ಕಳ ಗೀತ ಗಾಯನ ಸ್ಪರ್ಧೆಯ ಉದ್ದೇಶ ಕುರಿತು ಮಾತನಾಡಿದ ಜಿಲ್ಲಾ ಸಂಸ್ಥೆಯ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ, ಮಕ್ಕಳು
ದೇಶಭಕ್ತಿ ಗೀತೆಗಳನ್ನು ಹಾಡುವುದರಿಂದ ಅವರಲ್ಲಿ ರಾಷ್ಟ್ರೀಯ ಭಾವೈಕ್ಯತೆ ಹಾಗೂ ದೇಶಪ್ರೇಮ ಬೆಳೆಯುತ್ತದೆ.ಇದರಿಂದ ಬಾಲ್ಯದಿಂದಲೇ ಮಕ್ಜಳಲ್ಲಿ ದೇಶಭಕ್ತಿ ಮೂಡುತ್ತದೆ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಲು ಉತ್ತಮ ವೇದಿಕೆ ಒದಗಿಸುತ್ತದೆ ಎಂದರು.
ದೇಶದ ಹಿರಿಮೆ ಸಾರುವ ದೇಶಭಕ್ತಿ ಗೀತೆಗಳಿಂದ ವಿದ್ಯಾರ್ಥಿಗಳಲ್ಲಿ
ಅಗಾಧ ದೇಶಪ್ರೇಮ ಮಾಡುವುದರೊಂದಿಗೆ ನಾಡು- ನುಡಿ, ಸಂಸ್ಕೃತಿಯ
ಬಗ್ಗೆ ಅಭಿಮಾನ ಬೆಳೆಸಲು ಸಹಕಾರಿಯಾಗಿದೆ ಎಂದರು.
ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಉದ್ದೇಶ ಕುರಿತು ಮಾಹಿತಿ ನೀಡಿದ ಜಿಮ್ಮಿ ಸಿಕ್ವೇರಾ ಅವರು, ವಿದ್ಯಾರ್ಥಿಗಳು ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಮೂಲಕ ಶಿಸ್ತು- ಸಂಯಮ ಹಾಗೂ ಉತ್ತಮ ನಾಯಕತ್ವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸ್ಕೌಟ್, ಗೈಡ್ ನ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸಲು ಇಂತಹ ಸ್ಪರ್ಧೆಗಳು ಉತ್ತಮ ವೇದಿಕೆ ಒದಗಿಸುತ್ತವೆ ಎಂದರು.
ಗೀತ ಗಾಯನದಂತಹ
ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸೌಹಾರ್ದತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದರೊಂದಿಗೆ ಸ್ಪರ್ಧಾ ಮನೋಭಾವ ಬೆಳೆಸಲು
ಸಹಕಾರಿಯಾಗಿವೆ ಎಂದರು.
ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ನಡೆಸುತ್ತಿರುವ ವೈವಿಧ್ಯಮಯ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ತಮ್ಮ ಸ್ಥಳೀಯ ಸಂಸ್ಥೆಗೆ ಜಿಲ್ಲಾ ಪುರಸ್ಕಾರ ಲಭಿಸಿದೆ. ಇದಕ್ಕೆ ಕಾರಣರಾದವರಿಗೆಲ್ಲಾ ಕೃತಜ್ಞತೆ ಸಲ್ಲಿಸಿದರು.
ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಸಹಾಯಕ ಗೈಡ್ಸ್ ಆಯುಕ್ತೆ ಸಿ.ಎಂ.ಸುಲೋಚನ, ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ
ಎ.ಎಸ್.ತಮ್ಮಯ್ಯ, ಉಪಾಧ್ಯಕ್ಷ
ಅರುಣಕುಮಾರ್,
ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ,
ಕೋಶಾಧಿಕಾರಿ ಎನ್.ಎಸ್.ನರೇಶ್,
ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ,
ಸ್ಕೌಟ್ಸ್ ವಿಭಾಗದ ಎಡಿಸಿ ಬಿ.ಕೆ. ಗಣೇಶ್, ನಿವೃತ್ತ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್, ನಿವೃತ್ತ ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್,
ಸ್ಕೌಟ್ಸ್, ಗೈಡ್ಸ್ ನ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಇದ್ದರು. ಗೈಡ್ ಶಿಕ್ಷಕಿ ಕೆ.ಕೆ.ಗಾಯತ್ರಿ ನಿರ್ವಹಿಸಿದರು.
ಇದೇ ವೇಳೆ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಆದ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಹಾಗೂ ಕುಶಾಲನಗರ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಗೈಡ್ ಶಿಕ್ಷಕಿ ಭವ್ಯ
ಅವರನ್ನು ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಿ ಅಭಿನಂದಿಸಲಾಯಿತು.
*****”*********
Back to top button
error: Content is protected !!