ಅರಣ್ಯ ವನ್ಯಜೀವಿ

ಸಾಕಾನೆ ಶಿಬಿರಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕುಶಾಲನಗರ, ಸೆ 01:ಹಾರಂಗಿ ಅಣೆಕಟ್ಟೆ ಸಮೀಪದಲ್ಲಿರುವ ಸಾಕಾನೆ ಶಿಬಿರಕ್ಕೆ ಸಿಸಿಎಫ್ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿಸಿಎಫ್ ಸೋನಲ್ ವೃಷ್ಠಿ, ಡಿ.ಎಫ್.ಓ. ಅಭಿಷೇಕ್ ಅವರು ಪ್ರವಾಸಿಗರ ಸುರಕ್ಷತೆ ಹಿನ್ನಲೆಯಲ್ಲಿ ಶಿಬಿರದಲ್ಲಿ ಕೈಗೊಂಡಿರುವ ಕಾಮಗಾರಿ ಪರಿಶೀಲನೆ ನಡೆಸಿದರು.
ರಾಜ್ಯ ಸರ್ಕಾರ ಎಸ್. ಓ. ಪಿ. ಅನ್ವಯ ಮುಂದಿನ ಎರಡು ದಿನಗಳಲ್ಲಿ ಪ್ರವಾಸಿಗರಿಗೆ ಹಾರಂಗಿ ಸಾಕಾನೆ ಶಿಬಿರದಲ್ಲಿ ಮುಕ್ತವಾಗುವ ಸಾಧ್ಯತೆಯಿರುವ ಕಾರಣ ಶಿಬಿರದ ಪರಿಶೀಲನಾ ಕಾರ್ಯ ನಡೆಯಿತು.
ಈ ಸಂದರ್ಭ ಕುಶಾಲನಗರ ವಲಯ ಅರಣ್ಯಾಧಿಕಾರಿ ರಕ್ಷಿತ್, ಉಪವಲಯ ಅರಣ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!