ಸುದ್ದಿಗೋಷ್ಠಿ

ನಂ.387 ನೇ ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸುದ್ದಿಗೋಷ್ಠಿ

ಕುಶಾಲನಗರ, ಸೆ 05: ಕುಶಾಲನಗರದ
ನಂ. 387 ನೇ ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ 2025-26ನೇ ಸಾಲಿನಲ್ಲಿ ರೂ 58.12 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಬಿ.ಚಂದ್ರಪ್ಪ ಅವರು ತಿಳಿಸಿದರು.
ಸಂಘದ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಭಿವೃದ್ಧಿ ಬಗ್ಗೆ ಮಾಹಿತಿ ಒದಗಿಸಿದರು.
ಸಂಘವು ಕಳೆದ 83 ವರ್ಷಗಳಿಂದ ಸದಸ್ಯರಿಗೆ ಹಾಗೂ ಸದಸ್ಯರೇತರರಿಗೆ ಉತ್ತಮ ಸೇವೆ ಒದಗಿಸುತ್ತಾ ಬಂದಿದೆ. ಸಂಘವು 2122 ಸದಸ್ಯರನ್ನು ಹೊಂದಿದ್ದು ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿಗೆ ಪಡಿತರ ವಿತರಣೆಯ ಸಗಟು ನಾಮಿನಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ 100 ನ್ಯಾಯಬೆಲೆ ಅಂಗಡಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಕುಶಾಲನಗರ ಮುಖ್ಯ ರಸ್ತೆಯಲ್ಲಿ ವ್ಯಾಪಾರ ಸಂಕೀರ್ಣ ಹೊಂದಿದ್ದು, ಗ್ರಾಹಕರ ಶಾಖೆ, ಸ್ಟೇಷನರಿ, ಗೊಬ್ಬರ, ಕ್ರಿಮಿನಾಶಕ, ಬಿತ್ತನೆಬೀಜ, ಕೋವಿತೋಟಾ, ಜನತಾ ಬಜಾರ್ ಮೆಡಿಕಲ್ಸ್, ಹಾಗೂ ಸದಸ್ಯರಿಗೆ ಅತೀ ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣ ಸಾಲ, ವಾಹನ ಸಾಲ, ಅಡಮಾನ ಸಾಲಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು‌ ಸೇವೆ ಹಾಗೂ ಸೌಲಭ್ಯಗಳ ಬಗ್ಗೆ ವಿವರ ನೀಡಿದರು.
ಸಂಘದ 2025-26ನೇ ಸಾಲಿನ 75ನೇ ವಾರ್ಷಿಕ‌ ಮಹಾಸಭೆ ಸೆಪ್ಟೆಂಬರ್ 8 ರಂದು ಎಪಿಸಿಎಂಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಘದ ಸದಸ್ಯರಿಗೆ ಶೇ.20% ರಷ್ಟು ಡಿವಿಡೆಂಡ್ ನೀಡಲಾಗುವುದು ಮಹಾಸಭೆಯಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಬರುವ 10ನೇ ತರಗತಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ಕುಶಾಲನಗರ, ಹೆಬ್ಬಾಲೆ, ಸುಂಟಿಕೊಪ್ಪ ಭಾಗದ ಶಾಲೆಗಳ ವಿದ್ಯಾರ್ಥಿಗಳಿಗೆ 3 ಸಾವಿರ ಪುಸ್ತಕ ವಿತರಣೆ ಯೋಜನೆ ಹಮ್ಮಿಕೊಳ್ಳಲಾಗಿದೆ. ರೈತ ಸಹಕಾರ ಸಂಭಾಗಣದಲ್ಲಿ ಬೇಸಿಗೆ ಸಮಯದಲ್ಲಿ ಬಿಸಿಶಾಖ ಹೆಚ್ಚಾಗಿ ಇರುವುದರಿಂದ ಸದಸ್ಯರು ಹಾಗೂ ಸಾರ್ವಜನಿಕರ ಸಲಹೆ ಹಾಗೂ ಅಭಿಪ್ರಾಯದಂತೆ ಈಗಾಗಲೇ ಎರಡು ಹೆಲಿಕ್ಯಾಪ್ಟರ್ ಫ್ಯಾನ್‌ ಗಳನ್ನು ಅಳವಡಿಸಲಾಗಿದೆ.

ರೈತ ಭವನದಲ್ಲಿ ನಿರ್ಮಿಸಿರುವ ಹೈಟೆಕ್ ಶೌಚಾಲಯ ಉದ್ಘಾಟನೆ ಕೂಡ ಸೆ.8 ರಂದು ಬೆಳಗ್ಗೆ ನಡೆಯಲಿದೆ. ಇದರೊಂದಿಗೆ ಬೈಚನಹಳ್ಳಿಯಲ್ಲಿ ವಿಶಾಲವಾದ ಗೋದಾಮು ನಿರ್ಮಾಣ, ಸಾರಿಗೆ ಬಸ್ ನಿಲ್ದಾಣ ಮುಂಭಾಗದಲ್ಲಿ ಸುಸಜ್ಜಿತ ಕಾಂಪ್ಲೆಕ್ಸ್ ನಿರ್ಮಾಣ ಚಿಂತನೆ ಹೊಂದಲಾಗಿದೆ. ಸಂಘದ ಕಛೇರಿಯನ್ನು ಕೂಡ ಹೈಟೆಕ್ ಮಾಡಲಾಗುವುದು ಎಂದು ಅವರು ತಿಳಿಸಿದರು.
ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷೆ ಚಂದ್ರಕಲಾ ಹೆಚ್.ಟಿ, ನಿರ್ದೇಶಕರಾದ ಮಲ್ಲಿಕಾರ್ಜುನ ಬಿ.ಸಿ, ಮಹದೇವ್ ಹೆಚ್.ಎನ್, ಪಾರ್ವತಿ ಬಿ.ಎಂ, ಮಂಜುನಾಥ್ ಕೆ.ಎಸ್, ಪೊನ್ನಪ್ಪ ಎನ್.ಸಿ.
ಮತ್ತು‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ‌ ಜಗದೀಶ್ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!