ಧಾರ್ಮಿಕ

ಸಂತ ಸೆಬಾಸ್ಟಿಯನ್ ಚರ್ಚ್ ನಲ್ಲಿ ಮರಿಯಮ್ಮನ ಜನ್ಮ ಹಬ್ಬದ ಸಂಭ್ರಮ

ಕುಶಾಲನಗರ, ಸೆ 08:
ಕುಶಾಲನಗರದ ಸಂತ ಸೆಬಾಸ್ಟಿಯನ್ ಚರ್ಚ್ ನಲ್ಲಿ ಪವಿತ್ರ ಕನ್ಯಾಮರಿಯಮ್ಮನ ಜನ್ಮ ಹಬ್ಬವನ್ನು ಭಕ್ತಿಭಾವ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ಅಂಗವಾಗಿ ವಿಶೇಷ ನೊವೇನಾ ಪ್ರಾರ್ಥನೆ ನಡೆದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಮರಿಯಮ್ಮನ ಮಧ್ಯಸ್ಥಿಕೆಯನ್ನು ಕೋರಿ ಪ್ರಾರ್ಥಿಸಿದರು.
ಕುಶಾಲನಗರ ಸಂತ ಸೆಬಾಸ್ಟಿಯನ್ ಚರ್ಚ್ ನ ಧರ ಗುರುಗಳಾದ ವಂ. ಫಾ. ಜ್ಞಾನ ಪ್ರಕಾಶ್ ಅವರ ನೇತೃತ್ವದಲ್ಲಿ ನಡೆದ ಈ ಆಚರಣೆಯಲ್ಲಿ ಮೈಸೂರು ಪ್ರಾಂತ್ಯದ ವಂ. ಫಾ. ಆಂಥೋನಿ ಕುಮಾರ್ ಹಾಗೂ ಮೈಸೂರು ಪ್ರಾಂತ್ಯದ ವಂ. ಫಾ. ನವೀನ್ ಕುಮಾರ್ ಅವರು ಉಪಸ್ಥಿತರಿದ್ದರು. ಅಲ್ಲದೆ ತಪೋವನದ ಧರ್ಮ ಗುರುಗಳು ಈ ಧಾರ್ಮಕ ಆಚರಣೆಯಲ್ಲಿ ಭಾಗವಹಿಸಿದ್ದರು.
ವಂ. ಫಾ. ನವೀನ್ ಕುಮಾರ್ ಅವರಿಂದ ಪವಿತ್ರ ಬಲಿಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿ, ಪವಿತ್ರ ಕನ್ಯಾಮರಿಯಮ್ಮನ ಆಶೀರ್ವಾದ ಕೋರಿದರು.
ಧಾರ್ಮಿಕ ಕಾರ್ಯಕ್ರಮದ ನಂತರ ಕೇಕ್ ಕತ್ತರಿಸುವ ಮೂಲಕ ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ಬಳಿಕ ಎಲ್ಲರಿಗೂ ಸೌಹಾರ್ದತೆಯ ಉಪಹಾರ ಕೂಟ ಏರ್ಪಡಿಸಲಾಗಿತ್ತು. ಪಾದ್ರಿಗಳು ಮತ್ತು ಭಕ್ತರು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಂತೋಷದಿಂದ ಪಾಲ್ಗೊಂಡರು.

Related Articles

Leave a Reply

Your email address will not be published. Required fields are marked *

Back to top button
error: Content is protected !!