ಕುಶಾಲನಗರ, ಸೆ 09: ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ಮಾರ್ಕೆಟ್ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿ ಮಾದಾಪುರದ ಶಫೀಕ್ (27 ವರ್ಷ) ಎಂಬತನನ್ನು 14 ಗ್ರಾಂ ಎಂಡಿಎಂಎ ಸಹಿತ ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದರೊಂದಿಗೆ ಕೃತ್ಯಕ್ಕೆ ಬಳಸಿದ ಒಂದು ಕಾರು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ.
Back to top button
error: Content is protected !!