ಕುಶಾಲನಗರ, ಸೆ 09: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ಜಾಗದಲ್ಲಿ ಸಮುದಾಯದ ಭವನ ನಿರ್ಮಾಣಕ್ಕೆ ಶಾಸಕರ ನಿಧಿನಿಂದ ಅನುದಾನವನ್ನು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ಭರವಸೆ ನೀಡಿದ್ದಾರೆ.
ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪ್ರಭಾಕರ್ ನೇತ್ರತ್ವದಲ್ಲಿ ನಿಯೋಗ ಶಾಸಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈಗಾಗಲೇ ಭುವನಗಿರಿ ಗ್ರಾಮದಲ್ಲಿ ಕಾಯ್ದಿರಿಸಿಸುವ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆಯ ಜಾಗಕ್ಕೆ ಮೊದಲ ಹಂತವಾಗಿ 2 ಲಕ್ಷ ರೂಗಳನ್ನು ನೀಡುವುದಾಗಿ ಶಾಸಕರು ಭರವಸೆ ನೀಡಿದರು .
ಈ ಸಂದರ್ಭ ವೇದಿಕೆ ಉಪಾಧ್ಯಕ್ಷ ಪುಟ್ಟಸ್ವಾಮಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಡಿ.ಎಸ್. ಗಣೇಶ್, ಚಿಕ್ಕಯ್ಯ, ಸೋಮವಾರಪೇಟೆ ತಾಲ್ಲೂಕು ವೇದಿಕೆಯ ಅಧ್ಯಕ್ಷ ಪುನೀತ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯರಾದ ಗಿರೀಶ್, ಕುಮಾರ್, ಜಿಲ್ಲಾ ನಿರ್ದೇಶಕರಾದ ರವಿ, ತೊರೆನೂರು ದಿನೇಶ್, ಮಲ್ಲೇಶ್ ಮತ್ತಿತರರು ಇದ್ದರು.
Back to top button
error: Content is protected !!