ಕುಶಾಲನಗರ, ಸೆ 16: ಕುಶಾಲನಗರದ ವಾಸವಿ ಯುವಜನ ಚಾರಿಟೇಬಲ್ ಟ್ರಸ್ಟ್ ಮತ್ತು ವಾಸವಿ ಯುವಜನ ಸಂಘ, ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ದೇವಸ್ಥಾನದ ವತಿಯಿಂದ ನಿರ್ಮಿಸಿರುವ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಡಾ.ಮಂತರ್ ಗೌಡ ಮತ್ತು ಮಾಜಿ ಶಾಸಕ ಅಪ್ಪಚ್ಚುರಂಜನ್ ಭಾಗಿಯಾದರು.
ಬಿ.ಎಂ. ರಸ್ತೆ ನಿವೇಶನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡದ ಉದ್ಘಾಟನಾ ಸಮಾರಂಭದ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಪಾಲ್ಗೊಂಡು ಶುಭ ಹರಸಿದರು
ಮಾಜಿ ಶಾಸಕ ಅಪ್ಪಚ್ಚುರಂಜನ್ ಅವರು ಕಟ್ಟಡದ ನಾಮಫಲಕ ಅನಾವರಣಗೊಳಿಸಿ ಕಟ್ಟಡ ಶುಭಾರಂಭ ಮಾಡಿದರು. ಈ ಸಂದರ್ಭ ವಿವಿಧ ಪಕ್ಷಗಳ ಮುಖಂಡರು, ಟ್ರಸ್ಟ್, ಸಂಘದ ಪ್ರಮುಖರು ಇದ್ದರು.
Back to top button
error: Content is protected !!