ಕುಶಾಲನಗರ, ಸೆ 18: ಕುಶಾಲನಗರದ ವಿವೇಕಾನಂದ ಪಿಯು ಕಾಲೇಜು ಮತ್ತು ಎಂಜಿಎಂ ಡಿಗ್ರಿ ಕಾಲೇಜಿನಲ್ಲಿ ಕಲಾಸಂಗಮ 2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅತಿಥಿಗಳಿಗೆ ಸನ್ಮಾನ
ವಿದ್ಯಾರ್ಥಿಗಳಲ್ಲಿ ಅಡಗಿರುವ ಕಲಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ದೇವರಾಜು ಅವರು ಉದ್ಘಾಟಿಸಿದರು.
ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು.
ಪಿಯು ಮತ್ತು ಪದವಿ ಕಾಲೇಜು
ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ, ಲಿಖಿತಾ ಟಿ.ಎ.ಸೇರಿದಂತೆ ಉಪನ್ಯಶಕ ವೃಂದದವರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನಡೆದ ಆಕರ್ಷಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದವರ ಗಮನ ಸೆಳೆಯಿತು.